Bengaluru CityDistrictsKarnatakaLatestMain Post

ಬೆಂಗಳೂರು ಕುಲಾಲ ಸಂಘದ ಸುವರ್ಣ ಸಂಭ್ರಮ – ಕುಲಾಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಬೆಂಗಳೂರು: ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಹಿಂದುಳಿದ ಕುಲಾಲ ಸಮುದಾಯದ (Kulala Community) ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಬೇಕು ಎಂದು ಸರ್ಕಾರಕ್ಕೆ ಬೆಂಗಳೂರು ಕುಲಾಲ ಸಂಘ (Bengaluru Kulala Sangha) ಒತ್ತಾಯಿಸಿದೆ.

ಬೆಂಗಳೂರು ಕುಲಾಲ ಸಂಘದ 50ನೇ ವರ್ಷದ ಸುವರ್ಣ ಸಂಭ್ರಮದ (Golden Jubilee) ಹಿನ್ನೆಲೆಯಲ್ಲಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಕುಲಾಲ ಸಂಘ ಬೆಂಗಳೂರು ವತಿಯಿಂದ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ನಾಪತ್ತೆಯಾಗಿದ್ದ ದೇಗುಲ ಮಠದ ಮೂವರು ವಿದ್ಯಾರ್ಥಿಗಳು ವಾಪಸ್

ಕುಲಾಲ ಸಂಘದ ಅಧ್ಯಕ್ಷ ಪುರುಷೋತ್ತಮ್ ಚೇಂಡ್ಲಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಕುಲಾಲ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಹೀಗಾಗಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ನಿಗಮ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಘದ ವತಿಯಿಂದ ಒತ್ತಾಯ ಮಾಡಿದರು. ಇದನ್ನೂ ಓದಿ: ಶಿರಾಡಿ ಘಾಟ್ ರಸ್ತೆ ದುರಸ್ಥಿಗೆ ಮನವಿ- ಉದ್ಯಮಿಗಳಿಂದ ಸಂಸದ ವೀರೇಂದ್ರ ಹೆಗ್ಡೆಗೆ ಪತ್ರ

ಕಾರ್ಯಕ್ರಮದಲ್ಲಿ ಬೆಂಗಳೂರು ಕುಲಾಲ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.

Live Tv

Leave a Reply

Your email address will not be published. Required fields are marked *

Back to top button