ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಟನೆಯ ಹೊಸ ಸಿನಿಮಾಗೆ ಇಂದು (ಏ.6) ಅದ್ಧೂರಿಯಾಗಿ ಮುಹೂರ್ತ ಸಮಾರಂಭ ಜರುಗಿದೆ. ರಾಮನವಮಿಯ ದಿನದಂದು ಬೆಂಗಳೂರಿನ ಗಣಪತಿ ಸನ್ನಿಧಿಯಲ್ಲಿ ಈ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ:ರಾಮ್ ಚರಣ್ ‘ಪೆದ್ದಿ’ ಚಿತ್ರದ ಗ್ಲಿಂಪ್ಸ್ ಔಟ್- ನಟನ ಮಾಸ್ ಅವತಾರಕ್ಕೆ ಫ್ಯಾನ್ಸ್ ಫಿದಾ
‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ಸಿನಿಮಾವೊಂದನ್ನು ಗಣೇಶ್ ಒಪ್ಪಿಕೊಂಡಿದ್ದಾರೆ. ಇಂದು ಈ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಗಣೇಶ್, ಅಮೃತಾ ಅಯ್ಯರ್ (Amritha Aiyer), ರವಿ ಶಂಕರ ಗೌಡ, ರಂಗಾಯಣ ರಘು, ನಿರ್ಮಾಪಕ ಉದಯ್ ಮೆಹ್ತಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ. ಇದನ್ನೂ ಓದಿ:ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್
ಅರಸು ಅಂತಾರೆ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಗಣೇಶ್‌ಗೆ ನಾಯಕಿಯಾಗಿ ‘ಜೈ ಹನುಮಾನ್’ (Jai Hanuman) ಖ್ಯಾತಿಯ ಅಮೃತಾ ಅಯ್ಯರ್ (Amritha Aiyer) ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಕನ್ನಡಕ್ಕೆ ಅವರು ಎಂಟ್ರಿ ಕೊಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಸಿನಿಮಾದ ಫಸ್ಟ್ ಶೆಡ್ಯೂಲ್ ಮುಗಿಸಿ ನಂತರ ಟೈಟಲ್ ಅನೌನ್ಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.