‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಸಕ್ಸಸ್ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ತೆಲುಗಿನ ನಿರ್ಮಾಪಕರೊಬ್ಬರ ಜೊತೆ ನಟ ಕೈಜೋಡಿಸಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಶಿವಕಾರ್ತಿಕೇಯನ್, ಸಾಯಿ ಪಲ್ಲವಿ ಸಿನಿಮಾ ನೋಡಿ ಮ್ಯಾಜಿಕಲ್ ಎಂದ ಜಾನ್ವಿ ಕಪೂರ್
Advertisement
ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯೊಂದು ಗಣೇಶ್‌ಗೆ ನಿರ್ಮಾಣ ಮಾಡಲು ಮುಂದಾಗಿದೆ. ಬಿ.ಧನಂಜಯ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾಗೆ ‘ರೇಂಜ್ ಅಫ್ ರುದ್ರ’ ಎಂದು ಟೈಟಲ್ ಕೂಡ ಇಡಲಾಗಿದೆ. ಹೊಸ ವರ್ಷ ಜ.2ರಂದು ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಮಾಡೋದಾಗಿ ಚಿತ್ರತಂಡ ಬಿಗ್ ಅಪ್‌ಡೇಟ್ ಹಂಚಿಕೊಂಡಿದೆ.
Advertisement
View this post on Instagram
Advertisement
ಈ ಸಿನಿಮಾದಲ್ಲಿ ಎಂದೂ ಕಾಣಿಸಿಕೊಂಡಿರದ ವಿಭಿನ್ನ ಪಾತ್ರದಲ್ಲಿ ಗಣೇಶ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಬಾರಿ ಲವ್ ಸ್ಟೋರಿ ಹೇಳ್ತಾರಾ? ಕಥೆಯಲ್ಲೂ ಟ್ವಿಸ್ಟ್ ಇರಲಿದೆಯಾ ಎಂದು ಕಾಯಬೇಕಿದೆ.
Advertisement
ತೆಲುಗಿನ ಪೀಪಲ್ ಮೀಡಿಯಾ ಫ್ಯಾಕ್ಟರಿ ಮೂಲಕ ಟಿ.ಜಿ ವಿಶ್ವ ಪ್ರಸಾದ್ ಎಂಬುವವರು ಗಣೇಶ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ.