‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸಕ್ಸಸ್ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ‘ಜೇಮ್ಸ್’ (James) ಡೈರೆಕ್ಟರ್ ಚೇತನ್ ಕುಮಾರ್ (Chethan Kumar) ನಿರ್ದೇಶನದ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದನ್ನೂ ಓದಿ:ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ
ಗಣೇಶ್ ಈಗೀಗ ಸ್ಕ್ರೀಪ್ಟ್ ಆಯ್ಕೆ ಮಾಡೋದ್ರಲ್ಲಿ ಸಖತ್ ಬ್ಯೂಸಿಯಾಗಿದ್ದಾರೆ. ಗಣೇಶ್‌ಗೆ ಒಂದು ವರ್ಷದ ಹಿಂದೆಯೇ ಚೇತನ್ ಕಥೆ ಹೇಳಿದ್ದರು. ಕಥೆ ಇಷ್ಟವಾಗಿ ಸಿನಿಮಾಗೆ ಓಕೆ ಎಂದಿದ್ದರು. ಆದರೆ ನಿರ್ಮಾಣ ಸಂಸ್ಥೆ ಅಂತಿಮಗೊಂಡಿರಲಿಲ್ಲ. ಇದೀಗ ಎಲ್ಲವೂ ಅಂತಿಮವಾಗಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣ ಶುರುವಾಗಲಿದೆ.
ಪಿನಾಕ, ಯುವರ್ಸ್ ಸಿನ್ಸಿಯರ್ಲಿ ರಾಮ್, ‘ಹನುಮಾನ್’ ಖ್ಯಾತಿಯ ನಟಿ ಅಮೃತಾ ಅಯ್ಯರ್ ಜೊತೆಗಿನ ಚಿತ್ರದ ಶೂಟಿಂಗ್‌ನಲ್ಲಿ ನಟ ತೊಡಗಿಸಿಕೊಂಡಿದ್ದಾರೆ. ಆ ನಂತರ ಚೇತನ್ ಜೊತೆ ಗಣೇಶ್ ಸಿನಿಮಾ ಮಾಡಲಿದ್ದಾರೆ. ಇತ್ತ ‘ಗಟ್ಟಿಮೇಳ’ ನಟ ರಕ್ಷ್ ಜೊತೆ ಚೇತನ್ ಬರ್ಮ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್
ಹೀಗಾಗಿ ಒಪ್ಪಿಕೊಂಡ ಚಿತ್ರಗಳು ಇಬ್ಬರೂ ಪೂರ್ಣಗೊಳಿಸಿದ್ಮೇಲೆ ಆಗಸ್ಟ್‌ನಲ್ಲಿ ಚಿತ್ರ ಸೆಟ್ಟೇರಲಿದೆ. ಗಣೇಶ್‌ಗಾಗಿ ವಿಭಿನ್ನ ಕಥೆಯನ್ನೇ ಚೇತನ್ ಬರೆದಿದ್ದಾರೆ. ಇಬ್ಬರ ಕಾಂಬಿನೇಷನ್ ಚಿತ್ರ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.