ಧಾರವಾಡ: ಒಂದೆಡೆ ಮುಡಾ ಹಗರಣದ (MUDA Scam) ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿದೆ. ಇದರ ಮಧ್ಯೆ ಧಾರವಾಡದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ (Guarantee convention) ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ (Lokayukta Police) ದೂರು ಸಲ್ಲಿಕೆಯಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ (Government of Karnataka) ಅಧಿಕಾರಕ್ಕೆ ಬರುವ ಮುಂಚೆ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋ (Guarantee Scheme) ಜಾರಿಗೆ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ ಜಿಲ್ಲೆಯಲ್ಲೂ ನಡೆದಿದ್ದವು. ಆದರೆ, ಆ ಸಮಾವೇಶಗಳಲ್ಲಿ ಗೋಲ್ಮಾಲ್ ನಡೆದಿದ್ದು, ಅದರ ಸಂಪೂರ್ಣ ತನಿಖೆ ನಡೆಸುವಂತೆ ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ (RTI Worker) ಮಾಬುಸಾಬ್ ಯರಗುಪ್ಪಿ ಇದೀಗ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.
ಕಳೆದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 5 ಗ್ಯಾರಂಟಿ ಸಮಾವೇಶಗಳು ನಡೆದಿದ್ದವು. ಒಂದು ಸಮಾವೇಶದಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದ ಸಮಾವೇಶದ ಲೆಕ್ಕಪತ್ರಗಳೇ ಏರುಪೇರಾಗಿವೆ ಎಂದು ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಅವರು ಪಡೆದ ಮಾಹಿತಿಯಲ್ಲಿ ಬಹಿರಂಗಗೊಂಡಿದೆ. ಇದನ್ನೂ ಓದಿ: Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವಲಗುಂದದ ಸಮಾವೇಶದಲ್ಲಿ ಸಿಎಂ ಭಾಗಿಯಾಗಿದ್ದರು. ಈ ಸಮಾವೇಶದ ದಿನಾಂಕ ಮತ್ತು ಖರ್ಚು ವೆಚ್ಚದ ದಾಖಲೆಗಳೇ ಏರುಪೇರಾಗಿವೆ. ಸಮಾವೇಶ ಮುಗಿದ ಬಳಿಕ ಊಟದ ಕೊಟೇಶನ್ ಪಡೆಯಲಾಗಿದೆ. ಕೊಟೇಶನ್ ಸಲ್ಲಿಕೆಗೂ ಮುನ್ನವೇ ಊಟ, ಉಪಾಹಾರ ಪೂರೈಕೆ ಮಾಡಲಾಗಿದೆ. ಕುಂದಗೋಳ ಸಮಾವೇಶದಲ್ಲಿನ ಊಟ, ಉಪಹಾರದ ಕೊಟೇಶನ್‌ಗೆ ಸಹಿಯೇ ಇಲ್ಲ. ಆದರೂ ಏಜೆನ್ಸಿಯೊಂದಕ್ಕೆ ಊಟ, ಉಪಹಾರದ ಜವಾಬ್ದಾರಿಯನ್ನು ಜಿಲ್ಲಾಡಳಿತ ವಹಿಸಿಕೊಟ್ಟಿತ್ತು. ಈ ಸಮಾವೇಶಗಳ ಬಹುತೇಕ ಲೆಕ್ಕಪತ್ರಗಳು ಸರಿಯಾಗಿಲ್ಲ ಎಂದು ಆರೋಪಿಸಿರುವ ಆರ್‌ಟಿಐ ಕಾರ್ಯಕರ್ತ, ಗ್ಯಾರಂಟಿ ಸಮಾವೇಶದ ಕಾರ್ಯಕ್ರಮ ನಿರ್ವಹಣಾ ಸಮಿತಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ
ಈ ಸಮಿತಿ ಡಿಸಿ ದಿವ್ಯ ಪ್ರಭು, ಎಡಿಸಿ ಗೀತಾ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪಿಡಬ್ಲುಡಿ ಎಇ ವಿಜಯಕುಮಾರ, ಪಾಲಿಕೆ ಲೆಕ್ಕಾಧಿಕಾರಿ ವಿಶ್ವನಾಥ ಅವರನ್ನೊಳಗೊಂಡಿದೆ. ಇವರ ಹೆಸರನ್ನೊಳಗೊಂಡು ಇದೀಗ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ನವಲಗುಂದದ ಸಮಾವೇಶದಲ್ಲಿ 87 ಲಕ್ಷ ರೂ., ಧಾರವಾಡ ಸಮಾವೇಶದಲ್ಲಿ 1.37 ಕೋಟಿ ರೂ., ಹುಬ್ಬಳ್ಳಿ ಸಮಾವೇಶದಲ್ಲಿ 1.24 ಕೋಟಿ ರೂ., ಕಲಘಟಗಿ ಸಮಾವೇಶದಲ್ಲಿ 57 ಲಕ್ಷ ರೂ. ಹಾಗೂ ಕುಂದಗೋಳ ಸಮಾವೇಶಕ್ಕೆ 54 ಲಕ್ಷ ರೂ. ಖರ್ಚು ಮಾಡಲಾಗಿದ್ದು, ಇದರಲ್ಲಿ ವ್ಯತ್ಯಾಸವಿದೆ ಎಂದು ದೂರು ಸಲ್ಲಿಕೆಯಾಗಿದೆ. ಇದನ್ನೂ ಓದಿ: ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ