ಮುಂಬೈ: ಮಹಾರಾಷ್ಟ್ರದ (Maharashtra) ರಾಜಧಾನಿ ಮುಂಬೈನಲ್ಲಿ (Mumbai) ಮತ್ತೊಮ್ಮೆ ಭೀತಿ ಹುಟ್ಟಿಸುವಂತಹ ಬೆದರಿಕೆ (Threat) ಪೊಲೀಸರಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಶೀಘ್ರವೇ ಮುಂಬೈ ಅನ್ನು ಬ್ಲಾಸ್ಟ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿಯವರೆಗೆ ಪೊಲೀಸರಿಗೆ ಬೆದರಿಕೆ ಕರೆಗಳು ಫೋನ್ ಕರೆ ಇಲ್ಲವೇ ಇ-ಮೇಲ್‌ಗಳ ಮೂಲಕ ಬರುತ್ತಿದ್ದವು. ಇದೀಗ ಕಿಡಿಗೇಡಿಯೊಬ್ಬ ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮುಂಬೈ ಪೊಲೀಸರ (Mumbai Police) ಟ್ವಿಟ್ಟರ್ ಖಾತೆಗೆ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಇದನ್ನೂ ಓದಿ: ರಾತ್ರೋರಾತ್ರಿ ಟ್ರಕ್‌ನಲ್ಲಿ ಪ್ರಯಾಣ – ಚಾಲಕನ ಸಮಸ್ಯೆ ಆಲಿಸಿದ ರಾಗಾ
Advertisement
ಸಂದೇಶದಲ್ಲೇನಿದೆ?
ನಾನು ಮುಂಬೈಯನ್ನು ಅತಿ ಶೀಘ್ರದಲ್ಲಿ ಸ್ಫೋಟಿಸಲಿದ್ದೇನೆ ಎಂದು ದುಷ್ಕರ್ಮಿ ಬರೆದಿದ್ದು, ಅದನ್ನು ಮುಂಬೈ ಪೊಲೀಸರ ಟ್ವಿಟ್ಟರ್ ಖಾತೆಗೆ ಕಳುಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಪೊಲೀಸರು ಸಂದೇಶ ಸ್ವೀಕರಿದ ಬಳಿಕ ಅಲರ್ಟ್ ಆಗಿ ಸಂಬಂಧಪಟ್ಟ ವ್ಯಕ್ತಿಯ ಖಾತೆಯನ್ನು ಪರಿಶೀಲಿಸಿದ್ದಾರೆ. ಬಳಿಕ ಆರೋಪಿಯನ್ನು ಗುರುತಿಸಿ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಮರಗಳು ಉರುಳಿ ಬಿದ್ದಿದ್ದಕ್ಕೆ ಕಾರಣ ಸಿಕ್ತು