ಬೆಂಗಳೂರು: ನಗರದ ಜನತೆಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಉದ್ಯಾನಗಳು ರಾತ್ರಿ 8 ಗಂಟೆ ವರೆಗೂ ಓಪನ್ ಇರಲಿವೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಉದ್ಯಾನಗಳನ್ನು ಬೆಳಗ್ಗೆ 5 ರಿಂದ ರಾತ್ರಿ 8ರ ವರೆಗೆ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಮಾಡಿಕೊಡುವ ಸಂಬಂಧ ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಮೂರು ತಿಂಗಳ ಮೊದಲೇ KRS ಡ್ಯಾಂ ಸಂಪೂರ್ಣ ಭರ್ತಿ
Advertisement
Advertisement
ಬಿಬಿಎಂಪಿ ವ್ಯಾಪ್ತಿಯ ಉದ್ಯಾನಗಳನ್ನು ವಾಯು ವಿಹಾರಕ್ಕೆಂದು ಪ್ರತಿದಿನ ಬೆಳಗ್ಗೆ 5 ರಿಂದ 10ರ ವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 8ರ ವರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು. ಇನ್ಮುಂದೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲೆಂದು ಸಮಯವನ್ನು ಮಾರ್ಪಡಿಸಿ ಬೆಳಗ್ಗೆ 5 ರಿಂದ ರಾತ್ರಿ 8ರ ವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
Advertisement
Advertisement
ಉದ್ಯಾನಗಳ ನಿರ್ವಹಣೆಗಾಗಿ ಬೆಳಗ್ಗೆ 10 ರಿಂದ ಮದ್ಯಾಹ್ನ 1.30ರ ವರೆಗೆ ಸಮಯವನ್ನು ನಿಗದಿಪಡಿಸಿ ಬಿಬಿಎಂಪಿ ಆದೇಶಿಸಿದೆ. ಉದ್ಯಾನಗಳ ನಿರ್ವಹಣೆಯ ಸಮಯದಲ್ಲಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಹುಟ್ಟುಹಬ್ಬವನ್ನು ಸ್ನೇಹಿತರು ಆಚರಿಸಿದರೆ ಬಿಜೆಪಿಗೆ ಯಾಕೆ ಭಯ?: ಸಿದ್ದರಾಮಯ್ಯ