ಬೆಂಗಳೂರು: ನಗರದ ಪ್ರಮುಖ ಸಂಚಾರ ನಾಡಿ ಎಂದರೆ ಬಿಎಂಟಿಸಿ. ಬಿಎಂಟಿಸಿ ಪ್ರಯಾಣಿಕರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ದೊರೆಯಲಿದೆ.
ಬಸ್ ಪ್ರಯಾಣ ದರದಲ್ಲಿ ಭಾರೀ ಪ್ರಮಾಣದ ಇಳಿಕೆಗೆ ಬಿಎಂಟಿಸಿ ಚಿಂತನೆ ನಡೆಸಿದೆ. ಇದರ ಸಾಧಕ ಭಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಎಲ್ಲಾ ಮಾರ್ಗಗಳ ದರದ ಬಗ್ಗೆ ಬಿಎಂಟಿಸಿ ಈಗಾಗಲೇ ಮಾಹಿತಿ ಕಲೆ ಹಾಕುತ್ತಿದೆ.
ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸೂಚನೆ ಹಿನ್ನೆಲೆ ದರ ಇಳಿಕೆಗೆ ಬಿಎಂಟಿಸಿ ಮುಂದಾಗಿದೆ. ಈ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಮಾಹಿತಿ ನೀಡಿದ್ದು, ಶೀಘ್ರವೇ ದರ ಇಳಿಕೆಗೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಎಷ್ಟು ದರ ಇಳಿಕೆ ಮಾಡಬೇಕು ಮತ್ತು ಸ್ಟೇಜ್ ವೈಸ್ ದರ ಇಳಿಕೆ ಮಾಡಬೇಕು ಎಂದು ಚರ್ಚೆ ನಡೆಯುತ್ತಿದೆ. ಹೆಚ್ಚಿನ ಜನರನ್ನು ಬಿಎಂಟಿಸಿಯತ್ತ ಸೆಳೆಯಲು, ಬಸ್ ಪ್ರಯಾಣ ದರ ಕಡಿಮೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.