ಕ್ಯಾನ್ಸರ್ ರೋಗಿಗಳಿಗೆ ಸಿಹಿ ಸುದ್ದಿ – ಜಿಲ್ಲೆಗೊಂದು ಡೇ ಕೇರ್ ಕಿಮೋಥೆರಪಿ ಕೇಂದ್ರ

Public TV
1 Min Read
CHEMOTHERAPY 3

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕ್ಯಾನ್ಸರ್ (Cancer) ರೋಗಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ಜಿಲ್ಲೆಯಲ್ಲೂ ಡೇ-ಕೇರ್ ಕಿಮೋಥೆರಪಿ (Day Care Chemotherapy) ಕೇಂದ್ರ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ ಕೇಂದ್ರಗಳು ಇಲ್ಲ. ಇದರಿಂದ ಕ್ಯಾನ್ಸರ್ ಪೀಡಿತರಿಗೆ ಕಿಮೋಥೆರಪಿ ಮಾಡುವುದು ಕಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: 7 ವರ್ಷದಲ್ಲಿ ರಾಜ್ಯಕ್ಕೆ 59,274 ಕೋಟಿ ಜಿಎಸ್‌ಟಿ ನಷ್ಟ: ಬಜೆಟ್‌ನಲ್ಲಿ ಕೇಂದ್ರಕ್ಕೆ ತಿವಿದ ಸಿದ್ದರಾಮಯ್ಯ

SIDDARAMAIAH 1

ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸರ್ಕಾರ ಸಜ್ಜಾಗುತ್ತಿದೆ. ಇದಕ್ಕಾಗಿ 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮಾಮೋಗ್ರಫಿ (Digital Mammography) ಯಂತ್ರಗಳನ್ನು ಖರೀದಿಸಲು ನಿರ್ಧರಿಸಿದೆ. ಇದನ್ನೂ ಓದಿ: Karnataka Budget: ರಾಜ್ಯದ ಗ್ರಾಮೀಣ ರಸ್ತೆಗಳಿನ್ನು ಪ್ರಗತಿ ಪಥ, ಕಲ್ಯಾಣ ಪಥ.!

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆ, ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪೊಸ್ಕೊಪಿ (Colposcopy) ಉಪಕರಣಗಳ ಖರೀದಿಗೆ ರಾಜ್ಯ ಸರ್ಕಾರ ಒಟ್ಟು 21 ಕೋಟಿ ರೂ.ಗಳ ಅನುದಾನ ಒದಗಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರು ಏರ್‌ಪೋರ್ಟ್‌ ರನ್‌ವೇ ವಿಸ್ತರಣೆಗೆ ಅನುದಾನ ಘೋಷಣೆ – ತವರು ಜಿಲ್ಲೆಗೆ ಸಿಎಂ ಕೊಡುಗೆ ಏನು?

Share This Article