ನವದೆಹಲಿ: 10ನೇ ತರಗತಿ ಹಾಗೂ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು(ಸಿಬಿಎಸ್‌ಇ) ಬರೆದಿರುವ 33 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಂಡಳಿ ಸಿಹಿ ಸುದ್ದಿಯನ್ನು ತಂದಿದೆ. ಈ ವರ್ಷ ಬೋರ್ಡ್ ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವುದಾಗಿ ಮಂಡಳಿ ನಿರ್ಧರಿಸಿದೆ.
ಹೊಸ ಎಮ್‌ಸಿಕ್ಯು ಸ್ವರೂಪದ ಟರ್ಮ್-1 ಸಿಬಿಎಸ್‌ಇ ಪರೀಕ್ಷೆಗಳು ಕಠಿಣವಾಗಿತ್ತು ಎಂದು ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದ್ದರು. ಇದೇ ಸಂದರ್ಭದಲ್ಲಿ ಶಿಕ್ಷಣ ಮಂಡಳಿ ಯಾವುದೇ ಸಿಬಿಎಸ್‌ಇ ವಿದ್ಯಾರ್ಥಿಗಳನ್ನು ಉತ್ತೀರ್ಣ ಅಥವಾ ಅನುತ್ತೀರ್ಣಗೊಳಿಸದಂತೆ ನಿರ್ಧರಿಸಿದೆ. ಇದನ್ನೂ ಓದಿ: ಯುವತಿಯರ ಮದುವೆ ವಯಸ್ಸು 21ಕ್ಕೆ ಏರಿಕೆ ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ: ಶೋಭಾ ಕರಂದ್ಲಾಜೆ
Advertisement
Advertisement
ಮಂಡಳಿಯ ಪ್ರಕಾರ ಟರ್ಮ್ 1 ಬೋರ್ಡ್ ಪರೀಕ್ಷೆಯ ಫಲಿತಾಂಶಗಳಲ್ಲಿ ಅಂಕಗಳು ಮಾತ್ರವೇ ಇರಲಿದೆ. ಅಂದರೆ ವಿದ್ಯಾರ್ಥಿಗಳಿಗೆ ಪಾಸ್, ಫೇಲ್, ರಿಪೀಟರ್ ಅಥವಾ ಕಂಪಾರ್ಟ್ಮೆಂಟ್ ಗ್ರೇಡ್‌ಗಳನ್ನು ನೀಡಲಾಗುವುದಿಲ್ಲ ಎಂದು ಪರೀಕ್ಷಾ ಮಂಡಳಿ ಮೊದಲೇ ಹೇಳಿತ್ತು.
Advertisement
ಈ ನಿರ್ಧಾರದಿಂದಾಗಿ ಫೇಲ್ ಆಗುವ ಪ್ರಮಾಣ ಕಡಿಮೆಯಾಗುತ್ತದೆ. ವಿದ್ಯಾರ್ಥಿಗಳು ತಮ್ಮನ್ನು ತಾವು ಬೆಳೆಸಿಕೊಳ್ಳುವಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯುತ್ತಾರೆ. ಅವರು ತಮ್ಮ ಶಾಲಾ ಕೆಲಸದ ಮೇಲೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತದೆ ಎಂದು ಈ ಹಿಂದೆ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಹೇಳಿದ್ದರು. ಇದನ್ನೂ ಓದಿ: ರಾಷ್ಟಮಟ್ಟದ ಸ್ಕೇಟಿಂಗ್ – ಏಕಾಂಶ್ ಕುಮಾರ್‌ಗೆ 1 ಬೆಳ್ಳಿ, 1 ಕಂಚಿನ ಪದಕ
Advertisement
ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಟರ್ಮ್-1 ಬೋರ್ಡ್ ಪರೀಕ್ಷೆಯ ಫಲಿತಾಂಶ ಜನವರಿಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.