ಚಾಮರಾಜನಗರ: ಜಿಲ್ಲಾ ಹಾಲು ಒಕ್ಕೂಟವು (CHAMUL) ಉತ್ಪಾದಕರಿಗೆ ಗುಡ್ ನ್ಯೂಸ್ ನೀಡಿದೆ.
ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದಿಂದ (CHAMUL) ಪರಿಷ್ಕೃತ ದರ ಪ್ರಕಟವಾಗಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚಳ (Milk Price) ಮಾಡಿದೆ. ಇದನ್ನೂ ಓದಿ: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್
Advertisement
Advertisement
ಪ್ರಸ್ತುತ 1 ಲೀಟರ್ ಹಾಲಿಗೆ 28.85 ರೂ. ಸಿಗುತ್ತಿತ್ತು. ಇನ್ನು ಮುಂದೆ ಚಾಮುಲ್ (CHAMUL) ರೈತರಿಂದ 30.85 ರೂ.ಗೆ ಪ್ರತಿ ಲೀಟರ್ ಹಾಲನ್ನು ಖರೀದಿಸಲಿದೆ. ಇದನ್ನೂ ಓದಿ: ಬೆಳಗಾವಿ–ಹುನಗುಂದ–ರಾಯಚೂರು ಹೈವೇ ನಿರ್ಮಾಣಕ್ಕೆ ಅನುಮೋದನೆ: ಮೋದಿಗೆ ಜೋಶಿ ಅಭಿನಂದನೆ
Advertisement
ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಾಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಸಾವಿರಾರು ಹಸುಗಳು ರೋಗಕ್ಕೆ ತುತ್ತಾಗಿವೆ. ಈ ನಡುವೆ ಚಾಮುಲ್ ಹಾಲಿನ ದರ ಹೆಚ್ಚಿಸಿರುವ ಮೂಲಕ ಸಂಕಷ್ಟದಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತೆ ಮಾಡಿದೆ.
Advertisement
ಲಂಪಿ ವೈರಸ್ ಹೇಗೆ ಹರಡುತ್ತೆ?
ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Virus) ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ಹಸು, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ಸೊಳ್ಳೆ, ನೊಣ, ಉಣ್ಣೆ ಅಂತಹ ಕೀಟಗಳಿಂದ ಹಸುಗಳಿಗೆ ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ಹೀಗಾಗಿ ಜನರು ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸಲಹೆ ನೀಡಿದೆ.
ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲು ಸೂಚಿಸಿದೆ. ಜೊತೆಗೆ ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು ಅನುದಾನ ನೀಡಿದೆ. ಮಾಲೀಕರಿಗೆ ನಷ್ಟವನ್ನು ಭರಿಸಲು 2022ರ ಆಗಸ್ಟ್ 1ನೇ ತಾರೀಖಿನಿಂದ ಅನ್ವಯ ಆಗುವಂತೆ ಪ್ರತಿ ಹೈನು ರಾಸುಗಳಿಗೆ ಗರಿಷ್ಠ 20,000 ರೂ. ಮತ್ತು ಎತ್ತುಗಳಿಗೆ 30,000 ರೂ. ಹಾಗೂ ಪ್ರತಿ ಕರುವಿಗೆ 5,000 ರೂ. ಪರಿಹಾರ ನೀಡಲಾಗುತ್ತಿದೆ.