ತಿರುಪತಿಗೆ ತೆರಳೋ ಭಕ್ತಾದಿಗಳಿಗೆ ಗುಡ್ ನ್ಯೂಸ್ – ನೂತನ ರೈಲು ಸೇವೆ ಆರಂಭ

Public TV
1 Min Read
Tirupati Train

ಬೆಂಗಳೂರು: ಏಳು ಕೊಂಡಲವಾಡ ತಿರುಪತಿಯ (Tirupati) ಶ್ರೀನಿವಾಸನಿಗೆ ವಿಶ್ವದೆಲ್ಲೆಡೆ ಭಕ್ತಗಣವಿದೆ. ರಾಜ್ಯದ ಲಕ್ಷಾಂತರ ಜನ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ತಿರುಪತಿಗೆ ತೆರಳುವ ಭಕ್ತಾದಿಗಳಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ.

ವೆಂಕಟೇಶ್ವರನ ದರ್ಶನಕ್ಕಾಗಿ ರಾಜ್ಯದ ಚಿಕ್ಕಮಗಳೂರಿನಿಂದ (Chikkamagaluru) ನೂತನ ರೈಲು (Train) ಸಂಚಾರ ಆರಂಭವಾಗಿದ್ದು, ಚಿಕ್ಕಮಗಳೂರಿನಿಂದ ತಿರುಪತಿಗೆ ವಾರಕ್ಕೊಮ್ಮೆ ರೈಲು ಸಂಚರಿಸಲಿದೆ. ಪ್ರತಿ ಗುರುವಾರ ತಿರುಪತಿಯಿಂದ ಚಿಕ್ಕಮಗಳೂರಿಗೆ ರೈಲು ಸಂಚರಿಸಲಿದ್ದು, ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ರೈಲು ಹೊರಡಲಿದೆ. ಇದನ್ನೂ ಓದಿ: ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಮತ್ತೆ ಗುಡುಗಿದ ಯತ್ನಾಳ್

ಪ್ರಮುಖವಾಗಿ ಈ ರೈಲು ಚಿತ್ತೂರು, ಕಟ್ಪಾಡಿ, ಕುಪ್ಪಂ, ಬಂಗಾರಪೇಟೆ, ವೈಟ್ ಫೀಲ್ಡ್, ಕೆಆರ್ ಪುರಂ, ಬೆಂಗಳೂರು, ಚಿಕ್ಕಬಾಣಾವರ, ತುಮಕೂರು, ತಿಪಟೂರು, ಬಿರೂರು, ಕಡೂರು ಸೇರಿದಂತೆ ಹಲವು ನಿಲ್ದಾಣಗಳನ್ನು ಹೊಂದಿದೆ. ಹೀಗಾಗಿ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರು ಈ ಸೌಲಭ್ಯ ಬಳಸಿಕೊಳ್ಳುವಂತೆ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

Share This Article