ಬೆಂಗಳೂರು: ರೈತರಿಗೆ (Farmers) ಇಂಧನ ಇಲಾಖೆ (Ministry of Power) ಗುಡ್ ನ್ಯೂಸ್ ನೀಡಿದ್ದು ಇಲ್ಲಿಯವರೆಗೆ 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳು ಸಕ್ರಮ ಎಂದು ಘೋಷಿಸಿದೆ.
ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್ (K. J. George) ಈ ಮಾಹಿತಿ ನೀಡಿದ್ದಾರೆ.
Advertisement
ಇಂಧನ ಇಲಾಖೆಯಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್‌ಗಳು ಇನ್ನೊಂದು ವರ್ಷದಲ್ಲಿ ಸಕ್ರಮಗೊಳ್ಳಲಿದೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸು ಕೊಂದು ಅಡುಗೆ ಮಾಡಿದ ವೀಡಿಯೋ ಹರಿಬಿಟ್ರು – ಅಸ್ಸಾಂನಲ್ಲಿ 6 ಮಂದಿ ಬಂಧನ
Advertisement
Advertisement
ಅಕ್ರಮ ಪಂಪ್ ಸೆಟ್‌ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿ ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದೆ.
Advertisement
ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಾರ್ಜ್ ತಿಳಿಸಿದರು.