ಬೆಂಗಳೂರು: ಇತ್ತೀಚೆಗಷ್ಟೇ ನೇಕಾರರ ಸಾಲ ಮನ್ನಾ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದೀಗ ಮೀನುಗಾರರ ಸಾಲ ಮನ್ನಾ ಮಾಡಿ ನಿರ್ಧಾರ ಕೈಗೊಂಡಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಂಡಿದ್ದು, ಮೀನುಗಾರರ 50 ಸಾವಿರ ರೂ. ವರೆಗಿನ ಸಾಲವನ್ನು ಮನ್ನಾ ಮಾಡಲು ಕ್ರಮ ಕೈಗೊಳ್ಳಲಾಗಿದೆ. ವಾಣಿಜ್ಯ, ಪ್ರಾದೇಶಿಕ, ಗ್ರಾಮೀಣ ಬ್ಯಾಂಕ್‍ಗಳಿಂದ ಪಡೆದ ಸಾಲ ಮನ್ನಾ ಆಗಲಿದ್ದು, ಈ ಮೂಲಕ ನೇಕಾರರ ಜೊತೆಗೆ ಮೀನುಗಾರರಿಗೂ ಸಹ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಸ ನೀಡಿದ್ದಾರೆ.
Advertisement
Advertisement
ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರ ಒಟ್ಟು 60 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದ್ದು, ಸುಮಾರು 23,507 ಮೀನುಗಾರರು ಸಾಲಮನ್ನಾ ಪ್ರಯೋಜನ ಪಡೆಯಲಿದ್ದಾರೆ. 2017-18, 2018-19 ನೇ ಸಾಲಿನ ಅಂದರೆ ಎರಡು ವರ್ಷಗಳ ಹಿಂದಿನಿಂದ ಈ ವರೆಗೆ ಮಾಡಿದ 50 ಸಾವಿರ ರೂ.ಗಳ ವರಿಗಿನ ಸಾಲ ಮನ್ನಾ ಆಗಲಿದ್ದು, ಈ ಮೂಲಕ ಮೀನುಗಾರರಿಗೆ ಸಿಎಂ ಗಿಫ್ಟ್ ನೀಡಿದ್ದಾರೆ.
Advertisement
Advertisement
ನೇಕಾರರ ಸಾಲ ಮನ್ನಾ
ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು, ನೇಕಾರರು, ಮೀನುಗಾರರ ಸಂಕಷ್ಟವನ್ನು ಪರಿಹರಿಸಲು ವಿಶೇಷ ಗಮನ ಹರಿಸುತ್ತೇನೆ. ಈ ಸಂಬಂಧ ಕ್ಯಾಬಿನೆಟ್ ಸಭೆಯಲ್ಲಿ ಎರಡು ನಿರ್ಧಾರಗಳನ್ನು ಕೈಗೊಂಡಿದ್ದೇವೆ. ಪ್ರಧಾನ ಮಂತ್ರಿ ಸಮ್ಮಾನ್ ಯೋಜನೆಗೆ ಈಗಾಗಲೇ ಆಯ್ಕೆ ಮಾಡಲಾದ ರೈತರಿಗೆ ರಾಜ್ಯ ಸರ್ಕಾರದಿಂದಲೂ 4 ಸಾವಿರ ರೂ.ವನ್ನು ಎರಡು ಕಂತುಗಳಲ್ಲಿ ನೀಡಲು ನಿರ್ಧರಿಸಿದ್ದೇವೆ. ನೇಕಾರರ 100 ಕೋಟಿ ರೂ. ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇವೆ ಎಂದು ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ಯಡಿಯೂರಪ್ಪ ಘೋಷಣೆ ಮಾಡಿದ್ದರು.