ಬೆಂಗಳೂರು: ರಾಜ್ಯದ ವಿಶ್ವ ವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಯುಜಿಸಿ ವೇತನ ಪಡೆಯುತ್ತಿರುವ ಸರ್ಕಾರಿ ಪ್ರಾಧ್ಯಾಪಕರುಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಮಾನದಂಡದಡಿ ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ವಿಧಾನಸಭೆಯಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವಿಧೇಯಕ ಮಂಡಿಸಿದ್ದಾರೆ. ವಿವಿಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಧ್ಯಾಪಕರು ಯುಜಿಸಿ ವೇತನ ಪಡೆಯುತ್ತಿದ್ದು, ಅದೇ ಮಾದರಿಯಲ್ಲಿ ಪಿಂಚಣಿಯನ್ನೂ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಿಂಚಣಿ ಸೌಲಭ್ಯ ಕಲ್ಪಿಸಲು ಸರ್ಕಾರ ವಿಧೇಯಕ ಮಂಡಿಸಿದೆ.
Advertisement
Advertisement
ಅಂದಹಾಗೆ ಪಿಂಚಣಿ ವ್ಯವಸ್ಥೆಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡುವುದರಿಂದ ರಾಜ್ಯ ಸರ್ಕಾರ ತನ್ನ ನೌಕರರಿಗೆ ನೀಡುವ ಪಿಂಚಣಿ ಮಾದರಿಯಲ್ಲಿಯೇ ಯುಜಿಸಿ ವೇತನ ಪಡೆಯುತ್ತಿರುವ ಪ್ರಾಧ್ಯಾಪಕರಿಗೂ ಅನ್ವಯವಾಗುವಂತೆ ಸೂಕ್ತ ಕಾನೂನು ರೂಪಿಸಲು ವಿಧೇಯಕ ಮಂಡಿಸಿದೆ. ಇದೇ ಬಜೆಟ್ ಅಧಿವೇಶನದಲ್ಲಿ ವಿಧೇಯಕ ಬಹುತೇಕ ಅಂಗೀಕಾರವಾಗುವ ಸಾಧ್ಯತೆ ಇದೆ. ವಿಧೇಯಕ ಅಂಗೀಕಾರವಾದ್ರೆ ಯುಜಿಸಿ ವೇತನ ಪಡೆಯುತ್ತಿರುವ ಪ್ರಾಧ್ಯಾಪಕರು ಪಿಂಚಣಿ ಪಡೆಯುತ್ತಾರೆ.