– ಪರಿಷ್ಕರಣೆ ವೇಳೆಯಲ್ಲಿ ಗೃಹಲಕ್ಷ್ಮಿದುಡ್ಡಿಗಿಲ್ಲ ಅಡೆತಡೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ಮಹಿಳೆಯರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಬಾಕಿ ಉಳಿದಿರುವ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸರ್ಕಾರ ಮನೆ-ಮನೆ ಸರ್ವೆ ನಡೆಸಿ ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ನಡೆಯುವ ವೇಳೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡದಿರಲು ಈ ಹಿಂದೆ ಇಲಾಖೆ ನಿರ್ಧರಿಸಿತ್ತು. ಆದರೆ, ಇದೀಗ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ. ನಿನ್ನೆ ಗ್ಯಾರಂಟಿ ಪ್ರಾಧಿಕಾರದ ಸದಸ್ಯರ ಜೊತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಈ ಕುರಿತು ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯಲ್ಲಿ ಬಿರುಕು – ಜನರಲ್ಲಿ ಹೆಚ್ಚಿದ ಅತಂಕ
ಹೀಗಾಗಿ ಅನರ್ಹ ಪತ್ತೆಗಾಗಿ ಸರ್ವೆ ನಡೆಯುತ್ತಿದ್ದರೂ, ಅರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ 33ನೇ ಕಂತಿನ ಹಣ ಸಿಗಲಿದೆ. ಇಂದಿನಿಂದಲೇ ಮನೆ-ಮನೆ ಸರ್ವೆ ಕಾರ್ಯವೂ ಆರಂಭವಾಗಲಿದೆ.ಇದನ್ನೂ ಓದಿ: ‘ಬಳ್ಳಾರಿ ಚಲೋ’ಗೆ ಇಂದು ಚಾಲನೆ; ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಾದಯಾತ್ರೆ
