ಕೋಲಾರ: ಭಾರತದ ನಿರೀಕ್ಷಿತ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ 5 ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ಸೇರಿದಂತೆ ಕಥಾಹಂದರ ಹೊಂದಿರುವ ಕೆಜಿಎಫ್ ನಲ್ಲಿ ಈ ಚಿತ್ರ ಬಿಡುಗಡೆಯಾಗಲ್ಲ ಎಂಬ ಸುದ್ದಿ ಬಂದಿತ್ತು. ಆದರೆ ಈಗ ಈ ಸಿನಿಮಾ ಕೆಜಿಎಫ್‍ನಲ್ಲಿ ಬಿಡುಗಡೆಯಾಗುತ್ತಿದೆ.
ಕೆಜಿಎಫ್‍ನಲ್ಲಿ ಕೆಜಿಎಫ್ ಸಿನಿಮಾ ರಿಲೀಸ್ ಆಗಲಿದೆ. ಥಿಯೇಟರ್ ಮಾಲೀಕರ ಜೊತೆ ಮಾತನಾಡಿದ್ದೇನೆ. ಯಾವುದೇ ಗೊಂದಲ ಇಲ್ಲ. ಕೆಜಿಎಫ್‍ನ 2 ಚಿತ್ರಮಂದಿರದಲ್ಲಿ ಚಿತ್ರ ರಿಲೀಸ್ ಆಗುತ್ತೆ ಎಂದು ಹೊಂಬಾಳೆ ಫಿಲ್ಮ್ ನಿರ್ಮಾಪಕ ವಿಜಯ್ ತಿಳಿಸಿದ್ದಾರೆ. ಅಭಿಮಾನಿಗಳ ಒತ್ತಾಯದ ಹಿನ್ನೆಲೆಯಲ್ಲಿ ಕೆಜಿಎಫ್ ನಗರದಲ್ಲೂ ಕೆಜಿಎಫ್ ಸಿನಿಮಾ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಕೆಜಿಎಫ್ ನಲ್ಲಿ ರಿಲೀಸ್ ಆಗ್ತಿಲ್ಲ ಯಶ್ ಬಹುನಿರೀಕ್ಷಿತ ಚಿತ್ರ
Advertisement
Advertisement
ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದರು. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕರು 25 ಲಕ್ಷ ರೂ. ಕೇಳಿದ್ದರಂತೆ. ಈ ವಿಚಾರದ ಬಗ್ಗೆ ಎದ್ದಿದ್ದ ಗೊಂದಲ ಈಗ ಇತ್ಯರ್ಥವಾದ ಕಾರಣ ಸಿನಿಮಾ ಬಿಡುಗಡೆಯಾಗಲಿದೆ.
Advertisement
ಕೆಜಿಎಫ್ ತಾಲೂಕಿನ ಬೇತಮಂಗಲ ವಿನಾಯಕ ಚಿತ್ರಮಂದಿರ ಹಾಗೂ ನಗರದ ಮೀನಾಕ್ಷಿ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಈ ಮೂಲಕ ನಿರಾಸೆಯಲ್ಲಿದ್ದ ಯಶ್ ಹಾಗೂ ಕೆಜಿಎಫ್ ಚಿತ್ರದ ಅಭಿಮಾನಿಗಳ ಮೊಗದಲ್ಲಿ ಮಂದಹಾಸ ಮೂಡಿದೆ. ಕೋಲಾರ ಜಿಲ್ಲೆಯಲ್ಲಿ ಒಟ್ಟು 10ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
Advertisement
ಕೋಲಾರದ ಕೆಜಿಎಫ್ ನಲ್ಲಿ ಹುಟ್ಟುವ ಮಗು ಮುಂಬೈನಲ್ಲಿ ತನ್ನ ಹೆಜ್ಜೆಯನ್ನು ಮೂಡಿಸುತ್ತಾನೆ. ನೀನು ಹೇಗೆ ಬಾಳ್ತಿಯಾ ನನಗೆ ಗೊತ್ತಿಲ್ಲ. ಆದ್ರೆ ಸಾಯುವ ಮುನ್ನ ನೀನೊಬ್ಬ ಶ್ರೀಮಂತ, ಅತ್ಯಂತ ಶಕ್ತಿಯುಳ್ಳವನಾಗಿರಬೇಕು ಎಂದು ಮಗನಿಂದ ಮಾತು ಪಡೆದುಕೊಳ್ಳುವ ತಾಯಿ. ಮುಂಬೈ ಸೇರಿದ ಮೇಲೆ ಬದಲಾಗುವ ಬದುಕು. ಮತ್ತೆ ಕೋಲಾರ ಸೇರುವ ಹುಡುಗ. ಹೀಗೆ ಕಥೆಯ ಒಂದೊಂದು ಎಳೆಯನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ. ಅದೇ ರೀತಿಯಲ್ಲಿ ಇತರೆ ಕಲಾವಿದರ ಪಾತ್ರವನ್ನು ಇಲ್ಲಿ ಪರಿಚಯಿಸಲಾಗಿದೆ.
ಕೆಜಿಎಫ್ ಚಿತ್ರವನ್ನು ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕೆಜಿಎಫ್ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದಲ್ಲಿ ನಟಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಹಾಗೂ ವಸಿಷ್ಠ ಸಿಂಹ ನಟಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv