– ಮುಂಗಡ ಬುಕಿಂಗ್‌ಗೆ 10% ರಿಯಾಯಿತಿ
ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ (KSRTC) 2000 ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ ಎಂದು ರಾಜ್ಯ ರಸ್ತೆ ಸಾರಿಗೆ ಇಲಾಖೆ ತಿಳಿಸಿದೆ.
- Advertisement -
ಮಾ. 28ರಿಂದ 30ರವರೆಗೆ ಹೆಚ್ಚುವರಿ ಬಸ್‌ಗಳು ಸಂಚರಿಸದ್ದು ಮೆಜೆಸ್ಟಿಕ್‌ನಿಂದ(Majestic) ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲಾ ಐಷಾರಾಮಿ ಬಸ್‌ಗಳು ಲಭ್ಯವಾಗಲಿವೆ. ಮೆಜೆಸ್ಟಿಕ್, ಶಾಂತಿನಗರ, ಸ್ಯಾಟ್‌ಲೈಟ್, ಪೀಣ್ಯ ಬಸ್‌ನಿಲ್ದಾಣದಿಂದ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ. ಇದನ್ನೂ ಓದಿ: ಹಾಸನ ಹೊರವರ್ತುಲ ರಸ್ತೆ ಯೋಜನೆಗೆ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡ ಮನವಿ
- Advertisement -
- Advertisement -
ಹಬ್ಬ ಮುಗಿದ ಬಳಿಕ ವಿಶೇಷ ಬಸ್‌ಗಳ ಕಾರ್ಯಾಚರಣೆ ನಡೆಯಲಿದ್ದು, ಮಾ. 31ರಂದು ವಾಪಸ್ ಬರುವ ಪ್ರಯಾಣಿಕರಿಗೆ ಸರ್ಕಾರಿ ಬಸ್ ವ್ಯವಸ್ಥೆಯಿದೆ. ರಾಜ್ಯದಾದ್ಯಂತ ಹಾಗೂ ಅಂತರರಾಜ್ಯದಿಂದಲೂ ಕೆಎಸ್‌ಆರ್‌ಟಿಸಿ ಬಸ್‌ಗಳು ಲಭ್ಯವಾಗಲಿವೆ.
- Advertisement -
ಎಲ್ಲಿಂದ ಎಲ್ಲಿಗೆ ಬಸ್‌ಗಳ ಕಾರ್ಯಾಚರಣೆ ಇರಲಿದೆ
1.ಮೆಜೆಸ್ಟಿಕ್
ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗೋಕರ್ಣ, ಕಾರವಾರ ಭಾಗಗಳಿಗೆ ಇರಲಿದೆ. ಇನ್ನೂ ಉತ್ತರ ಕರ್ನಾಟಕದ ಹುಬ್ಬಳಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಸೇರಿ ಹಲವೆಡೆ ಬಸ್ ವ್ಯವಸ್ಥೆ ಇರಲಿದೆ. ಹೊರರಾಜ್ಯಗಳಾದ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೂ ವಿಶೇಷ ಬಸ್‌ಗಳು ಲಭ್ಯವಿರಲಿದೆ. ಇದನ್ನೂ ಓದಿ: ಹನಿಟ್ರ‍್ಯಾಪ್ ತನಿಖೆಗೆ ಹೈಕಮಾಂಡ್ ಅನುಮತಿ ಬೇಕಾ – ಸಿಎಂ ನಿಲುವೇನು?
2.ಸ್ಯಾಟಲೈಟ್ ಬಸ್ ನಿಲ್ದಾಣ
ಮೈಸೂರು ಭಾಗದ ಎಲ್ಲಾ ಕಡೆಗಳಿಗೆ ಬಸ್‌ಗಳ ವ್ಯವಸ್ಥೆಯಿರಲಿದೆ. ಮಂಡ್ಯ, ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವಿರಾಜಪೇಟೆ, ಪಿರಿಯಾಪಟ್ಟಣ ಭಾಗಗಳಿಗೆ ಬಸ್‌ಗಳಿರಲಿವೆ.
3.ಶಾಂತಿನಗರ ಬಸ್ ನಿಲ್ದಾಣ
ಈ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆ ಬಸ್‌ಗಳು ಲಭ್ಯವಿರಲಿದೆ. ಇದನ್ನೂ ಓದಿ: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ – ಅತ್ಯಾಚಾರದ ಕುರಿತು ಅಸಂವೇದನಾಶೀಲ ಟೀಕೆ ಎಂದು ಖಂಡನೆ
ಇನ್ನೂ ಪ್ರಯಾಣಿಕರು ಎರಡೂ ಬದಿಯ ಮುಂಗಡ ಟಿಕೆಟ್ ಬುಕ್ ಮಾಡಿದರೆ 10% ರಿಯಾಯಿತಿ ಸಿಗಲಿದೆ. ಜೊತೆಗೆ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇಕಡ 5ರಷ್ಟು ರಿಯಾಯಿತಿ ದೊರಯಲಿದೆ. ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಸ್ ಬುಕ್ ಮಾಡಲು ಅವಕಾಶವಿದೆ.