ಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋಗಾಗಿ (Yellow Line Metro) ಕಾಯುತ್ತಿರುವವರಿಗಾಗಿ ಇದೀಗ ಬಿಎಂಆರ್‌ಸಿಎಲ್ (BMRCL) ಗುಡ್‌ನ್ಯೂಸ್ ನೀಡಿದ್ದು, ಇದೇ ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತವಾಗಲಿದೆ ಎಂದು ತಿಳಿಸಿದೆ.
ಯಾವಾಗ ಯೆಲ್ಲೋ ಲೈನ್ ಮೆಟ್ರೋ ಓಪನ್ ಆಗುತ್ತೆ ಎನ್ನುತ್ತಿದ್ದವರಿಗೆ ಇದೀಗ ಬಿಗ್ ಅಪ್ಡೇಟ್ ನೀಡಿದ್ದು, ಕೊನೆಗೂ ಮಾರ್ಗ ಸಂಚಾರ ಮುಕ್ತ ಆಗುವ ಕುರಿತು ಮಾಹಿತಿ ನೀಡಿದೆ.
ಈಗಾಗಲೇ ಹಲವು ಬಾರಿ ಯೆಲ್ಲೋ ಮಾರ್ಗ ಸಂಚಾರ ಮುಕ್ತವಾಗಲಿದೆ ಎಂದು ಹೇಳಿದ್ದ ದಿನಾಂಕದಿಂದ ಮುಂದೂಡಿಕೆಯಾಗಿದ್ದು, ಜನ ರೋಸಿ ಹೋಗಿದ್ದರು. ಈ ಮಧ್ಯೆ ಆದಷ್ಟು ಬೇಗ ಮಾರ್ಗ ಓಪನ್ ಮಾಡಬೇಕು ಎಂದು ಬಿಎಂಆರ್‌ಸಿಎಲ್ ತೀವ್ರಗತಿಯಲ್ಲಿ ಕೆಲಸ ಆರಂಭಿಸಿದೆ. ಈ ಮಾರ್ಗದಲ್ಲಿ ಡ್ರೈವರ್ ಲೈಸ್ ಮೆಟ್ರೋಗಳು (Driverless Metro) ಓಡಾಡಲಿದ್ದು. ಟ್ರೈನ್‌ಗಳ ಬರುವಿಕೆ ತಡವಾಗಿದ್ದ ಕಾರಣದಿಂದಲೇ ಪ್ರಯಾಣ ಆರಂಭಿಸಲು ಸಾಧ್ಯವಾಗಿರಲಿಲ್ಲ. ಈಗಲೂ ಕೂಡ ಪೂರ್ಣ ಪ್ರಮಾಣದ ರೈಲುಗಳು ಬಿಎಂಆರ್ಸಿಎಲ್ ಕೈ ಸೇರಿಲ್ಲ. ಸದ್ಯ ತಮ್ಮ ಬಳಿ ಇರುವ ಎರಡು ರೈಲುಗಳಿಗೆ, ಶೀಘ್ರದಲ್ಲೇ ಇನ್ನೆರೆಡು ರೈಲು ಸೇರಿಸಿ ಮಾರ್ಗವನ್ನು ಸಂಚಾರ ಮುಕ್ತ ಮಾಡಲು ತಯಾರಿ ಶುರು ಮಾಡಿದೆ.ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಈಗ ಬೇಕಿದೆ ಹನುಮನ ಶ್ರೀರಕ್ಷೆ – ನಿತ್ಯ ಹನುಮಾನ್ ಚಾಲಿಸ ಪಠಿಸುತ್ತಿರೋ ಪ್ರಜ್ವಲ್ ರೇವಣ್ಣ
ಇದೇ ತಿಂಗಳ ಅಂತ್ಯಕ್ಕೆ ಒಂದು ರೈಲು ಬಿಎಂಆರ್‌ಸಿಎಲ್ ಕೈ ಸೇರಲಿದೆ. ಜೂನ್ ಮೊದಲ ವಾರಕ್ಕೆ ಮತ್ತೊಂದು ರೈಲು ಸಿಗಲಿದೆ. ಅಲ್ಲಿಗೆ ಒಟ್ಟು 4 ರೈಲು ಈ ಮಾರ್ಗಕ್ಕೆ ಸಿಗಲಿದೆ. ಬಳಿಕ ಸಂಪೂರ್ಣ ಮಾರ್ಗ ಪರಿಶೀಲನೆ ಮಾಡಿ, ಜುಲೈ ಮೊದಲ ವಾರದಲ್ಲಿ ಈ ನಾಲ್ಕು ರೈಲುಗಳ ಮೂಲಕವೇ ಮಾರ್ಗ ಸಂಚಾರ ಮುಕ್ತ ಮಾಡುವುದು ಬಹುತೇಕ ಖಚಿತವಾಗಿದೆ. ಪ್ರತಿ 30 ನಿಮಿಷಕ್ಕೊಂದು ರೈಲಿನಂತೆ, ಸಂಚಾರ ಮಾಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಒಟ್ಟು ನಿಲ್ದಾಣಗಳ ಪೈಕಿ 3 ಅಥವಾ 5 ನಿಲ್ದಾಣಕ್ಕೊಂದು ಸ್ಟಾಪ್‌ನಂತೆ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಚರಣೆ ಮಾಡಲು ಪ್ಲ್ಯಾನ್ ಕೂಡ ಮಾಡಲಾಗಿದೆ.
ಇನ್ನೂ ಮಾರ್ಗ ಓಪನ್ ಸಂಬಂಧ 4ನೇ ಟ್ರೈನ್ ಬರುತ್ತಿದ್ದಂತೆ ಮತ್ತೊಮ್ಮೆ ಕೇಂದ್ರ ರೈಲ್ವೆ ಸುರಕ್ಷತಾ ಅಧಿಕಾರಿಗಳನ್ನ ಮತ್ತೊಮ್ಮೆ ಮಾರ್ಗ ಪರಿಶೀಲನೆಗೆ ಬಿಎಂಆರ್‌ಸಿಎಲ್ ಆಹ್ವಾನಿಸಲಿದೆ. ಅದರಂತೆ ಅಧಿಕಾರಿಗಳು ಭೇಟಿ ನೀಡಿ, ಮತ್ತೆ ಸಿಗ್ನಲಿಂಗ್ ಪರೀಕ್ಷೆ ನಡೆಸಿ ಮಾರ್ಗ ಓಪನ್‌ಗೆ ಗ್ರೀನ್ ಸಿಗ್ನಲ್ ನೀಡಲಿದೆ. ಕೂಡಲೇ ಸರ್ಕಾರಕ್ಕೆ ಪತ್ರ ಬರೆದು ಅನುಮತಿ ಪಡೆದು ಜುಲೈ ಅಂತ್ಯದೊಳಗೆ ಮಾರ್ಗ ಓಪನ್ ಆಗುವ ಸಾಧ್ಯತೆ ಇದೆ.ಇದನ್ನೂ ಓದಿ: ವಿನಯ್ ಸೋಮಯ್ಯ ಯಾರು ಅನ್ನೋದೆ ಗೊತ್ತಿಲ್ಲ: ಶಾಸಕ ಪೊನ್ನಣ್ಣ