ಬೆಂಗಳೂರು: ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ಇನ್ನು ಮುಂದೆ ಕಾಲೇಜು ಸೇರುವ ವಿದ್ಯಾರ್ಥಿನಿಯರು ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ. ಸಂಪೂರ್ಣ ಶುಲ್ಕ ವಿನಾಯಿತಿ ಇರಲಿದೆ. ಬಾಲಕಿಯರು ಇನ್ನು ಮುಂದೆ ಒಂದೇ ಒಂದು ರೂಪಾಯಿ ಶುಲ್ಕ ಕಟ್ಟುವಂತೆ ಇಲ್ಲ. ವಿದ್ಯಾರ್ಥಿನಿಯರ ಕಾಲೇಜು ಶುಲ್ಕವನ್ನು ಸರ್ಕಾರವೇ ಕಟ್ಟಲಿದೆ.
Advertisement
Advertisement
ಇಷ್ಟು ದಿನ ಕಾಲೇಜಿಗೆ ದಾಖಲಾಗುವ ವೇಳೆ ವಿದ್ಯಾರ್ಥಿಗಳಿಂದ ಶುಲ್ಕ ಅಂತ 456 ರೂಪಾಯಿ ಕಟ್ಟಿಸಿಕೊಳ್ಳಲಾಗುತ್ತಿತ್ತು. ಬಳಿಕ ಅ ಹಣವನ್ನು ವಿದ್ಯಾರ್ಥಿನಿಯರ ಖಾತೆಗೆ ವಾಪಸ್ ಹಾಕಲಾಗುತ್ತಿತ್ತು. ಇದರಿಂದ ಅನೇಕ ಸಮಸ್ಯೆ ಉಂಟಾಗುತ್ತಿತ್ತು. ಇದನ್ನೂ ಓದಿ: ಹಲ್ಲುಜ್ಜದೇ ಕಿಸ್ ಮಾಡೋದನ್ನ ತಡೆದಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿರಾಯ
Advertisement
ವಿದ್ಯಾರ್ಥಿನಿಯರಿಗೆ ದಾಖಲಾತಿ ಸಮಯದಲ್ಲಿ ಹಣ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಇನ್ನು ಮುಂದೆ ಸರ್ಕಾರವೇ ಶುಲ್ಕ ಪಾವತಿ ಮಾಡಲಿದೆ. ಕಾಲೇಜಿನ ಪ್ರಾಂಶುಪಾಲರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ. ಇದರಿಂದ ದಾಖಲಾತಿ ವೇಳೆ ವಿದ್ಯಾರ್ಥಿನಿಯರು ಉಚಿತವಾಗಿ ಕಾಲೇಜಿಗೆ ದಾಖಲು ಆಗಬಹುದಾಗಿದೆ.
Advertisement
Live Tv