ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ – ಐಪಿಎಲ್ ಫೈನಲ್‌ನಲ್ಲಿ ಆಡಲಿದ್ದಾರೆ ಫಿಲ್ ಸಾಲ್ಟ್

Public TV
1 Min Read
Phil Salt

ಅಹಮದಾಬಾದ್: ಐಪಿಎಲ್ ಫೈನಲ್‌ಗೆ (IPL  Final) ಕೆಲವೇ ಗಂಟೆಗಳು ಬಾಕಿಯಿರುವಾಗಲೇ ಆರ್‌ಸಿಬಿ (RCB) ಅಭಿಮಾನಿಗಳಿಗೆ ಫಿಲ್ ಸಾಲ್ಟ್ ಗುಡ್‌ನ್ಯೂಸ್ ಕೊಟ್ಟಿದ್ದಾರೆ.  ಇಂದು ಆರ್‌ಸಿಬಿ ಮತ್ತು ಪಂಜಾಬ್‌ ಮಧ್ಯೆ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಫಿಲ್‌ ಸಾಲ್ಟ್‌ (Phil Salt) ಆಡಲಿದ್ದಾರೆ.

ಫೈನಲ್ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ಅಭ್ಯಾಸ ವೇಳೆ ಸಾಲ್ಟ್ ಕಾಣಿಸಿಲ್ಲ ಎಂದು ವರದಿಯಾಗಿತ್ತು. ಇಂಗ್ಲೆಂಡಿನ ಫಿಲ್ ಸಾಲ್ಟ್ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಹೀಗಾಗಿ ಅವರು ತವರಿಗೆ ತೆರಳಿರಬಹುದು. ಇಂದಿನ ಪಂದ್ಯದಲ್ಲಿ ಅವರು ಆಡುವುದಿಲ್ಲ ಎಂದೆಲ್ಲಾ ಹೇಳಲಾಗುತ್ತಿತ್ತು. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ.  ಇದೀಗ ಇಂದಿನ ಫೈನಲ್ ಪಂದ್ಯದಲ್ಲಿ ಆಡುವ ಸಲುವಾಗಿ ಫಿಲ್ ಸಾಲ್ಟ್ ಮರಳಿ ಅಹಮದಾಬಾದ್‌ಗೆ ಬಂದಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್‌ಗೆ ಇನ್ಮುಂದೆ ಕರ್ನಾಟಕಕ್ಕೆ ಪ್ರವೇಶವಿಲ್ಲ – ಕರವೇ ನಾರಾಯಣಗೌಡ ಕಿಡಿ

ಪತ್ನಿಗೆ ಹೆರಿಗೆಯಾದ ಹಿನ್ನೆಲೆ ಮಗುವನ್ನು ನೋಡಲು ಸಾಲ್ಟ್ ತವರಿಗೆ ತೆರಳಿದ್ದರು. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಮತ್ತೆ ಅಹಮದಾಬಾದ್‌ಗೆ ಫಿಲ್ ಸಾಲ್ಟ್ ಬಂದಿಳಿದಿದ್ದಾರೆ. ಇದರಿಂದ ಐಪಿಎಲ್ ಫೈನಲ್ ಆಡಲು ಆರ್‌ಸಿಬಿ ತಂಡಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಇದನ್ನೂ ಓದಿ: ಆರ್‌ಸಿಬಿಗೆ ಡಬಲ್‌ ಶಾಕ್‌ – ಟಿಮ್‌ ಡೇವಿಡ್‌ ಆಡೋದು ಡೌಟ್‌!

ಆರ್‌ಸಿಬಿ ಪರ 12 ಪಂದ್ಯ ಆಡಿರುವ ಸಾಲ್ಟ್ ಒಟ್ಟು 387 ರನ್ ಹೊಡೆದು ಟಾಪ್ 20 ಬ್ಯಾಟರ್ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

Share This Article