ಬೆಂಗಳೂರು: ಸಿಲಿಕಾನ್ ಸಿಟಿ (Bengaluru) ಜನರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಬಿಎಂಆರ್‌ಸಿಎಲ್ (BMRCL) ಮುಂದಾಗಿದೆ. ನಮ್ಮ ಮೆಟ್ರೋವಿನ ಹಳದಿ ಮಾರ್ಗ (Metro Yellow Line) ಈ ವರ್ಷಾಂತ್ಯಕ್ಕೆ ಕಾರ್ಯಾಚರಣೆಗೊಳ್ಳಲಿದೆ.
ಬಹು ನಿರೀಕ್ಷಿತ ಆರ್‌ವಿ ರಸ್ತೆಯಿಂದ (RV Road) ಬೊಮ್ಮಸಂದ್ರ (Bommasandra) ಮೆಟ್ರೋ (Metro) ಮಾರ್ಗವನ್ನು ಈ ವರ್ಷದ ಅಂತ್ಯಕ್ಕೆ ಆರಂಭಿಸಲು ಬಿಎಂಆರ್‌ಸಿಎಲ್ ಸಜ್ಜಾಗಿದೆ. ಪ್ರಸಕ್ತ ವರ್ಷಾಂತ್ಯಕ್ಕೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮವು ತಿಳಿಸಿದೆ.
Advertisement
Advertisement
Advertisement
ಬಿಎಂಆರ್‌ಸಿಎಲ್ ಈ ಮೊದಲು ಎರಡು ಹಂತಗಳಲ್ಲಿ ಮೆಟ್ರೋ ರೈಲು ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಿತ್ತು. ಮೊದಲ ಹಂತದಲ್ಲಿ ಜೂನ್ ತಿಂಗಳಲ್ಲಿ ಬೊಮ್ಮಸಂದ್ರದಿಂದ ಸಿಲ್ಕ್‌ಬೋರ್ಡ್‌ವರೆಗೆ ಮತ್ತು ಎರಡನೇ ಹಂತದಲ್ಲಿ ಡಿಸೆಂಬರ್‌ನಲ್ಲಿ ಸೆಂಟ್ರಲ್ ಸಿಲ್ಕ್‌ಬೋರ್ಡ್‌ನಿಂದ ಆರ್‌ವಿ ರಸ್ತೆವರೆಗೆ ರೈಲುಗಳ ಸಂಚಾರಕ್ಕೆ ಉದ್ದೆಶಿಸಿತ್ತು. ಈ ಕ್ರಮದಿಂದ ಪ್ರಯಾಣಿಕರನ್ನು ಆಕರ್ಷಿಸುವುದು ಕಷ್ಟವೆಂದು ಅರಿತು ಒಂದೇ ಹಂತದಲ್ಲಿ ಪೂರ್ಣಗೊಳಿಸಲು ನಿರ್ಧರಿಸಿದೆ.
Advertisement
ಆರ್‌ವಿ ರಸ್ತೆ-ಬೊಮ್ಮಸಂದ್ರ ನಡುವಿನ ಮಾರ್ಗವು ಅತ್ಯಧಿಕ ವಾಹನ ದಟ್ಟಣೆಯಿಂದ ಕೂಡಿದೆ. ಇದರಿಂದ ವಾಹನ ಸವಾರರು ಬಹುಪಾಲು ಸಮಯವನ್ನು ರಸ್ತೆಯಲ್ಲಿಯೇ ಕಳೆಯುವಂತಾಗಿದೆ. ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಶುರುವಾದರೆ ಸಾಕಷ್ಟು ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ ಪ್ರಮುಖ ಸಂಪರ್ಕ ಸೇತುವೆಯಾಗಲಿದೆ.
ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ ಮೆಟ್ರೋ ಮಾರ್ಗ ನಿರ್ಮಾಣಕ್ಕೆ 4,255 ಕೋಟಿ ರೂ. ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಶೇ.50 ಕ್ಕೂ ಅಧಿಕ ಕಾಮಗಾರಿ ಮುಗಿದಿದ್ದು, ಉಳಿದಂತೆ ಬಾಕಿ ಇರುವ ಕಾಮಗಾರಿಯನ್ನು ಮುಂದಿನ 6 ತಿಂಗಳಲ್ಲಿ ಪೂರೈಸಿಕೊಳ್ಳಲು ಬಿಎಂಆರ್‌ಸಿಎಲ್ ಮುಂದಾಗಿದೆ. ಇದನ್ನೂ ಓದಿ: ಗ್ಯಾರಂಟಿ ಲಾಭ ಪಡೆಯಲು ದುಂಬಾಲು – ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್ ಡಿಮ್ಯಾಂಡ್
ನಿಲ್ದಾಣಗಳು:
ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ ಬರುವ ಮೆಟ್ರೋ ನಿಲ್ದಾಣಗಳೆಂದರೆ, ಆರ್‌ವಿ ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್, ಕೋನಪ್ಪನ ಅಗ್ರಹಾರ, ಹೊಸೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ.
ಐಟಿ-ಬಿಟಿ ಕಂಪನಿಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ನಮ್ಮ ಮೆಟ್ರೋ ಉತ್ತಮ ಆದಾಯವನ್ನೂ ತಂದುಕೊಡಲಿದೆ. ಈ ಮಾರ್ಗದಲ್ಲಿ ಸುಮಾರು 3.70 ಲಕ್ಷ ಮಂದಿ ಪ್ರಯಾಣಿಸಬಹುದೆಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಕಳೆದ 5 ವರ್ಷಗಳಲ್ಲೇ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್ ಡ್ಯಾಂ ನೀರು ಸಂಗ್ರಹ