ನವದೆಹಲಿ: ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಕರ್ನಾಟಕದಲ್ಲಿ ಸೂರ್ಯಕಾಂತಿ(Sunflower), ಹೆಸರುಕಾಳು(Green Gram)ಸೋಯಾಬೀನ್(Soybean) ಖರೀದಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಈ ವಿಚಾರವನ್ನು ತಿಳಿಸಿ ಕರ್ನಾಟಕದ ರೈತ ಬಾಂಧವರ ಹಿತ ಕಾಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಪ್ರಮುಖ ಹಾಗೂ ರೈತಪರ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ರೈತ ಬಾಂಧವರ ಹಿತ ಕಾಯಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಪ್ರಮುಖ ಹಾಗೂ ರೈತಪರ ನಿರ್ಧಾರವನ್ನು ಕೈಗೊಂಡಿದೆ.
2026-27ರ ಮುಂಗಾರು (ಖರೀಫ್) ಋತುವಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ (PSS) ರಾಜ್ಯದ ಪ್ರಮುಖ ಬೆಳೆಗಳನ್ನು ಖರೀದಿಸಲು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್… pic.twitter.com/lzaYPO0NQV
— Pralhad Joshi (@JoshiPralhad) September 29, 2026
ಜೋಶಿ ಪೋಸ್ಟ್‌ನಲ್ಲಿ ಏನಿದೆ?
2026-27ರ ಮುಂಗಾರು ಋತುವಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ಪ್ರಮುಖ ಬೆಳೆಗಳನ್ನು ಖರೀದಿಸಲು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ನನ್ನ ಮನವಿ ಹಾಗೂ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ ಖರೀದಿಗೆ ಅನುಮೋದನೆ ನೀಡಿದ್ದಾರೆ. ಇದನ್ನೂ ಓದಿ: ಮೊಬೈಲ್ ಬಿಟ್ಟು ಚೆನ್ನಾಗಿ ಓದು ಎಂದ ಪೋಷಕರು; ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ
ರೈತರ ಶ್ರಮಕ್ಕೆ ತಕ್ಕ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ದೊರಕಿಸಿಕೊಡುವ ನಿಟ್ಟಿನಲ್ಲಿ, ಕರ್ನಾಟಕದ ಕೃಷಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರಮುಖ ಪ್ರಸ್ತಾವನೆಗೆ ತಕ್ಷಣವೇ ಸ್ಪಂದಿಸಿ ಅನುಮೋದನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬರೆದಿದ್ದಾರೆ.

