ಭೋಪಾಲ್: ಮಧ್ಯಪ್ರದೇಶ (Madhya Pradesh) ಕ್ಯಾಬಿನೆಟ್ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ (Women Employees) ಮೀಸಲಾತಿ (Reservation) ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ.
ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆಯಾಗಿ ಜಾರಿ ಬಂದರೆ ಮಹಿಳಾ ಮೀಸಲಾತಿ ಪ್ರಮಾಣ 35% ಏರಿಕೆಯಾಗಲಿದೆ.
Advertisement
ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಮಧ್ಯಪ್ರದೇಶದಲ್ಲಿ ಸರ್ಕಾರಿ ಸೇವೆಗಳ ಎಲ್ಲಾ ನೇಮಕಾತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು 33% ರಿಂದ 35% ಗೆ ಹೆಚ್ಚಿಸಲಾಗಿದೆ. ಇದು ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಮಧ್ಯಪ್ರದೇಶದ ಡಿಸಿಎಂ ರಾಜೇಂದ್ರ ಶುಕ್ಲಾ ತಿಳಿಸಿದ್ದಾರೆ.
Advertisement
Advertisement
ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ 254 ಹೊಸ ರಸಗೊಬ್ಬರ ಮಾರಾಟ ಕೇಂದ್ರಗಳನ್ನು ತೆರೆಯಲು ಸಂಪುಟ ಅನುಮೋದನೆ ನೀಡಿದೆ. ಈ ನಿರ್ಧಾರ ಜಾರಿಯಿಂದ ರೈತರಿಗೆ ಗೊಬ್ಬರಕ್ಕಾಗಿ ಕಾಯುವುದರಿಂದ ಮುಕ್ತಿ ಸಿಗಲಿದೆ ಎಂದಿದ್ದಾರೆ.
Advertisement
ವೈದ್ಯಕೀಯ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ, ಅಭ್ಯರ್ಥಿಗಳ ವಯಸ್ಸನ್ನು 40 ವರ್ಷದಿಂದ 50 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟವು ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.