ಬೆಂಗಳೂರು: ಗಾಳಿ ಆಂಜನೇಯ ದೇವಸ್ಥಾನ (Gali Anjaneya Temple) ಮುಜರಾಯಿ ವ್ಯಾಪ್ತಿಗೆ ಬಂದ ಬೆನ್ನಲ್ಲೆ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಶೀಘ್ರದಲ್ಲೇ ಹೋಮ, ಹವನ ಮಾಡಿಸಲು ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ.ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್
ಮುಜರಾಯಿ ಇಲಾಖೆ (Muzrai Department) ಆಯುಕ್ತ ವೆಂಕಟೇಶ್ ಅವರು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಗಾಳಿ ಆಂಜನೇಯ ದೇವಸ್ಥಾನದ ಯಂತ್ರ, ಪ್ರಸಾದವನ್ನು ಆನ್‌ಲೈನ್ ಮೂಲಕ ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ಜೊತೆಗೆ ಹೋಮ, ಹವನ ಮಾಡಿಸಲು ಶೀಘ್ರದಲ್ಲೇ ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ದೇಗುಲ ಮುಜರಾಯಿ ವ್ಯಾಪ್ತಿಗೆ ಸೇರಿದ ಬಳಿಕ ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಅಲ್ಲದೇ ಪೂಜಾದರ, ಹೋಮ, ಹವನ, ಪ್ರಸಾದ ದರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಹೀಗಾಗಿ ಆನ್‌ಲೈನ್ ಮೂಲಕ ಎಲ್ಲಾ ಸೇವೆಗಳನ್ನು ಭಕ್ತರಿಗೆ ಸಿಗುವಂತೆ ಮಾಡಲು ಮುಜರಾಯಿ ಇಲಾಖೆ ಮುಂದಾಗಿದೆ ಎಂದಿದ್ದಾರೆ.ಇದನ್ನೂ ಓದಿ: ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದ್ರೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ – ಸಿಎಂ