– ವರದಾ ನದಿಗೆ ಪೂಜೆ ಸಲ್ಲಿಸಿದ ಅನ್ನದಾತರು
– ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯ
ಹಾವೇರಿ: ಮಲೆನಾಡು (Malnad) ಪ್ರದೇಶಗಳಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ವರದಾ ನದಿಯಲ್ಲಿ (Varada River) ನೀರಿನ ಹರಿವು ಹೆಚ್ಚಿದ್ದು, ನದಿ ತೀರದ ಗ್ರಾಮಗಳ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಹಾನಗಲ್ (Hanagal) ತಾಲೂಕಿನ ಬಾಳಂಬೀಡ ಗ್ರಾಮದ ರೈತರು (Farmers) ವರದಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಸುಮಾರು ಶೇಕಡಾ 50ರಷ್ಟು ಮಳೆ ಕೊರತೆ ಮಳೆ ಕೊರತೆ ಆಗುತ್ತಿದೆ ಎನ್ನಲಾಗಿದೆ. ಈ ನಡುವೆ ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಆದರೆ ಮುಂಗಾರು ಕೈಕೊಟ್ಟಿರುವುದರಿಂದ ಅನೇಕ ರೈತರು ಇನ್ನೂ ಭತ್ತದ ನಾಟಿ ಕಾರ್ಯ ಆರಂಭಿಸಿಲ್ಲ. ಜಿಲ್ಲೆಯ ಕೆರೆಗಳನ್ನು ಏತನೀರಾವರಿ ಯೋಜನೆಯಡಿ ತುಂಬಿಸುವ ಮೂಲಕ ರೈತರಿಗೆ ನೆರವಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಪಂಚಾಯತ್ ಚುನಾವಣೆ: ಈಶ್ವರ ಖಂಡ್ರೆ

ಬಾಳಂಬೀಡ ಏತನೀರಾವರಿ ಯೋಜನೆ ಶುರುವಾಗಿದ್ದು, ಸುಮಾರು 180 ಕೆರೆಗಳನ್ನು ತುಂಬಿಸುವ ಗುರಿ ಹೊಂದಲಾಗಿದೆ. ಮಳೆಯ ಕೊರತೆಯ ನಡುವೆಯೂ ನೀರಾವರಿ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಕೆರೆಗಳಿಗೆ ನೀರು ಹರಿಸುವ ಕೆಲಸವನ್ನು ಮಾಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್
