ಟಿಪಿಎಲ್ 3ನೇ (TPL) ಸೀಸನ್‌ಗೆ ಅಧಿಕೃತ ಚಾಲನೆ ಸಿಕ್ಕಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ನಿನ್ನೆಯಿಂದ ಪಂದ್ಯಾವಳಿಗಳು ಪ್ರಾರಂಭವಾಗಿವೆ. ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಓ1 ಕ್ರಿಕೆಟ್ ಅಕಾಡೆಮಿಯ ಬಿಆರ್ ಸುನಿಲ್ ಕುಮಾರ್ ಕಳೆದ ಎರಡು ವರ್ಷಗಳಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ (Television Premier League) ನಡೆಸುತ್ತಾ ಬಂದಿದ್ದು, ಈಗಾಗಲೇ ಯಶಸ್ವಿಯಾಗಿ 2 ಸೀಸನ್ ಮುಕ್ತಾಯಗೊಂಡಿದೆ. ನಿನ್ನೆಯಿಂದ 3ನೇ ಸೀಸನ್ ಶುರುವಾಗಿದ್ದು, ಮಾರ್ಚ್ 3 ರವರೆಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯಲಿದೆ.
Advertisement
ಹುಬ್ಬಳ್ಳಿಯ ರಾಜನಗರದ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಮೊದಲ ದಿನ ನಡೆದ ಪಂದ್ಯದಲ್ಲಿ ಅಶ್ವಸೂರ್ಯ ರೈಡರ್ಸ್ ಹಾಗೂ ಜಿಎಲ್ ಆರ್ ವಾರಿಯರ್ಸ್ ಹಾಗೂ ರಾಸು ವಾರಿಯರ್ ತಂಡಗಳು ಜಯಗಳಿಸಿವೆ.
Advertisement
Advertisement
ಯಾವ ಯಾವ ತಂಡಗಳು ಭಾಗಿ?
Advertisement
ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್ ಲೈಫ್ ಸೆವಿಯರ್, ಎವಿಆರ್ ಟಸ್ಕರ್ಸ್, ರಾಸು ವಾರಿಯರ್, ಭಜರಂಗಿ ಬಾಯ್ಸ್, ದಿ ಬುಲ್ ಸ್ಕ್ವಾಡ್, ಇನ್ಸೇನ್ ಕ್ರಿಕೆಟ್ ಟೀಂ, ಜಿಎಲ್‌ಆರ್ ವಾರಿಯರ್ಸ್ ಸೇರಿದಂತೆ ಒಟ್ಟು 10 ಟೀಮ್ ಗಳು ಭಾಗವಹಿಸಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಟ್ಟಿದ್ದಾರೆ. ಈ 10 ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್‌ಗಳಿದ್ದಾರೆ. ಎವಿಆರ್ ಗ್ರೂಪ್ಸ್ ಹೆಚ್ ವೆಂಕಟೇಶ್ ರೆಡ್ಡಿ ಹಾಗೂ ಅರವಿಂದ್ ವೆಂಕಟೇಶ್ ರೆಡ್ಡಿ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ.
ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ. ರಂಜಿತ್ ಕುಮಾರ್ ಎಸ್ ಓನರ್, ಜಿಎಲ್‌ಆರ್ ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ (Loose Madha Yogi) ನಾಯಕನಾದರೆ ರಾಜೇಶ್ ಎಲ್ ಓನರ್ ಆಗಿದ್ದಾರೆ. ಇನ್ಸೇನ್ ಕ್ರಿಕೆಟ್ ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, ದಿ ಬುಲ್ ಸ್ಕ್ವಾಡ್ ತಂಡಕ್ಕೆ ಶರತ್ ಪದ್ಮನಾಭ್ ನಾಯಕನಾದರೆ ಮೋನಿಶ್ ಓನರ್ ಆಗಿದ್ದಾರೆ. ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕನಾಗಿದ್ದು, ಸ್ವಸ್ತಿಕ್ ಆರ್ಯ ಓನರ್ ಆಗಿದ್ದಾರೆ.
ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ (Dheekshith Shetty) ನಾಯಕ-ರಘು ಭಟ್ ಹಾಗೂ ಸುಗುಣ ಓನರ್, ಎವಿಆರ್ ತಂಡಕ್ಕೆ ಚೇತನ್ ಸೂರ್ಯ ನಾಯಕ – ಅರವಿಂದ್ ವೆಂಕಟ್ ರೆಡ್ಡಿ ಓನರ್, ಬಯೋಟಾಪ್ ಲೈಫ್ ಸೆವಿಯರ್ ಅಲಕಾ ನಂದ ಶ್ರೀನಿವಾಸ್ ನಾಯಕ-ವಿಶ್ವನಾಥ್, ಪ್ರಸನ್ನ ಓನರ್, ಕೆಕೆಆರ್ ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮಿಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಟಿಪಿಎಲ್ ರಾಯಭಾರಿಯಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ (Ragini Dwivedi) ಇದ್ದು, ಪ್ರಮುಖ ನಟರಾದ ಲೂಸ್ ಮಾದ ಯೋಗಿ, ರವಿಶಂಕರ್ ಗೌಡ ಟಿಪಿಎಲ್ 3ನಲ್ಲಿ ಆಡುತ್ತಿರುವುದು ವಿಶೇಷ.