ನವದೆಹಲಿ: ಟೀಂ ಇಂಡಿಯಾ (Team India) ಆಟಗಾರ ಮನೋಜ್ ತಿವಾರಿ (Manoj Tiwari) ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ.
2008 ರಲ್ಲಿ ಬ್ರಿಸ್ಬೇನ್‍ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ (Cricket) ಪದಾರ್ಪಣೆ ಮಾಡಿದ್ದರು. ಈ ವರ್ಷ ರಣಜಿ ಟೂರ್ನಿಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ 37 ವರ್ಷದ ಮನೋಜ್ ತಿವಾರಿ ಕ್ರಿಕೆಟ್ ವೃತ್ತಿ ಬದುಕಿದೆ ಗುಡ್‍ಬೈ ಹೇಳಿದ್ದಾರೆ. ಇದನ್ನೂ ಓದಿ: `ಮಹಿ’ಯಂತೆ ಸಕ್ಸಸ್‌ಫುಲ್ ಕ್ಯಾಪ್ಟನ್ ಆಗ್ತಾರಾ `ಪಾಂಡ್ಯ’?
Advertisement
Advertisement
ಮನೋಜ್ ತಿವಾರಿ ಕ್ರಿಕೆಟ್ ಜೊತೆಗೆ ರಾಜಕೀಯದಲ್ಲೂ ಹೊಸ ಇನಿಂಗ್ಸ್ ಆರಂಭಿಸಿದ್ದರು. ಅದರಂತೆ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಪ್ರಸ್ತುತ ಪಶ್ಚಿಮ ಬಂಗಾಳದ ಯುವ ಸಬಲೀಕರಣ ಮತ್ತು ಕ್ರೀಡಾ (West Bengal Sports Minsiter) ಸಚಿವರಾಗಿದ್ದಾರೆ.
Advertisement
2015ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದ ತಿವಾರಿ 12 ಏಕದಿನ ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದರು. ಇದರಲ್ಲಿ ಒಂದು ಅರ್ಧ ಶತಕ, ಒಂದು ಶತಕ ಸೇರಿದಂತೆ ಒಟ್ಟು 287 ರನ್ ಕಲೆಹಾಕಿದ್ದಾರೆ.
Advertisement
ತಮ್ಮ ಕ್ರಿಕೆಟ್ ವೃತ್ತಿ ಜೀವನದುದ್ದಕ್ಕೂ ಬೆಂಬಲ ನೀಡಿದ್ದ ಪತ್ನಿ ಮತ್ತು ಮಾಜಿ ಸಹ ಆಟಗಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ಅವರ ಕೋಚ್ ಮನಬೇಂದ್ರ ಘೋಷ್ ಅವರಿಗೆ ಗೌರವ ಸಮರ್ಪಿಸಿದ್ದಾರೆ.
ಐಪಿಎಲ್‍ನಲ್ಲಿ ಮನೋಜ್ ತಿವಾರಿ ಕೊಲ್ಕತ್ತಾ ನೈಟ್ ರೈಡರ್ಸ್, ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 98 ಪಂದ್ಯಗಳನ್ನಾಡಿರುವ ಅವರು ಒಟ್ಟು 1,686 ರನ್ ಬಾರಿಸಿದ್ದಾರೆ. ಇದರಲ್ಲಿ 7 ಅರ್ಧಶತಕಗಳೂ ಸೇರಿವೆ. ಇದನ್ನೂ ಓದಿ: ಐಷಾರಾಮಿ ಬೇಡ, ಕನಿಷ್ಠ ಸೌಲಭ್ಯವನ್ನು ವೆಸ್ಟ್ ಇಂಡೀಸ್ ಮಾಡಿಲ್ಲ – ಹಾರ್ದಿಕ್ ಪಾಂಡ್ಯ ಗರಂ
Web Stories