ಭುವನೇಶ್ವರ: ಗೂಡ್ಸ್ ರೈಲೊಂದು (Goods Train) ಹಳಿ ತಪ್ಪಿ, ರೈಲ್ವೇ ನಿಲ್ದಾಣದ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದ (Odisha) ಜಾಜ್ಪುರ ಜಿಲ್ಲೆಯ ಕೊರೈ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವುದಾಗಿ ವರದಿಯಾಗಿದೆ.
ಗೂಡ್ಸ್ ರೈಲು ಹಳಿತಪ್ಪಿದ ಘಟನೆಯಿಂದಾಗಿ ರೈಲ್ವೇ ಮಾರ್ಗ ಸ್ಥಗಿತಗೊಂಡಿದೆ. ರೈಲ್ವೇ ನಿಲ್ದಾಣಕ್ಕೆ ರೈಲು ಡಿಕ್ಕಿ ಹೊಡೆದಿರುವುದರಿಂದ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದ ತೀವ್ರತೆ ಎಷ್ಟಿತ್ತು ಎಂದರೆ, 200 ಮೀ. ದೂರದ ಜನರಿಗೂ ಅಪಘಾತದ ಶಬ್ದ ಜೋರಾಗಿ ಕೇಳಿಸಿದೆ ಎಂದು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಪೊಲೀಸರು, ಆರ್ಪಿಎಫ್, ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹಾಗೂ ರೈಲ್ವೇ ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ಧಾವಿಸಿದ್ದಾರೆ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಇಂಡೋನೆಷ್ಯಾದಲ್ಲಿ ಭೂಕಂಪ 40ಕ್ಕೂ ಅಧಿಕ ಸಾವು – 300ಕ್ಕೂ ಹೆಚ್ಚು ಮಂದಿಗೆ ಗಾಯ
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಪಘಾತಕ್ಕೆ ಕಾರಣವನ್ನು ತಿಳಿದುಕೊಳ್ಳಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್ಕುಮಾರ್