ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದು, ನಾಲ್ಕು ಬೋಗಿಗಳು ಪಲ್ಟಿಯಾಗಿ ಬಿದ್ದಿರುವ ಘಟನೆ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ.
ಇಂದು ಮುಂಜಾನೆ ಸಿಮೆಂಟ್ ಮೂಟೆಗಳನ್ನು ತುಂಬಿಕೊಂಡು ಆಗ್ರಾದಿಂದ ದೆಹಲಿಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದೆ. ನಾಲ್ಕು ಬೋಗಿಗಳು ಪಲ್ಟಿಯಾಗಿ ಬಿದ್ದಿವೆ. ನಾಲ್ಕು ಬೋಗಿ ಪಲ್ಟಿಯಾಗಿದ್ದರಿಂದ ಹಳಿ ಹಾಳಾಗಿದ್ದು, ಸ್ಥಳದಲ್ಲಿ ಜೆಸಿಬಿ ಹಾಗೂ ರೈಲ್ವೆ ತಂಡದಿಂದ ದುರಸ್ತಿ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ
ಇಂದು ಮುಂಜಾನೆ ಘಟನೆ ಸಂಭವಿಸಿದೆ. ಗೂಡ್ಸ್ ರೈಲು ಬೋಗಿ ಪಲ್ಟಿಯಾದ ಬಗ್ಗೆ ಮಾಹಿತಿ ಪಡೆದ ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ಆರ್‌ಪಿಎಫ್ ತಂಡ ಸ್ಥಳಕ್ಕೆ ಧಾವಿಸಿ ಮಾಹಿತಿ ಕಲೆ ಹಾಕಿದ್ದಾರೆ. ಜೊತೆಗೆ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಮಾರ್ಗ ಬದಲಿಸಲಾಗಿದೆ. ಸಿಮೆಂಟ್ ತುಂಬಿದ ಕೋಚ್‍ಗಳನ್ನು ತೆಗೆದುಹಾಕಲು 300ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ
ಸರಕು ಸಾಗಣೆ ರೈಲು ಹಳಿ ತಪ್ಪಿದ ನಂತರ ಮಥುರಾ ಮತ್ತು ದೆಹಲಿ ನಡುವೆ ರೈಲು ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.