ರಾಮನಗರ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ (Goods Vehicle) ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ರಾಮನಗರ (Ramanagara) ತಾಲೂಕಿನ ಮಾಯಗಾನಹಳ್ಳಿ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Mysuru Expressway) ನಡೆದಿದೆ.
ಅಮೀರ್ (25) ಮೃತ ದುರ್ದೈವಿ. ಗೂಡ್ಸ್ ವಾಹನ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಯುಗಾದಿ ಭವಿಷ್ಯ: ಹೊಸ ವರ್ಷ ಯಾರಿಗೆ ಅದೃಷ್ಟ? ಯಾರಿಗೆ ಸಂಕಷ್ಟ?
ಅಪಘಾತದ ರಭಸಕ್ಕೆ ಗೂಡ್ಸ್ ವಾಹನ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಾದಭೂಮಿಗೆ ತಂಪೆರೆದ ಆಲಿಕಲ್ಲು ಮಳೆ – ನಾನಾ ಅವಾಂತರ ಸೃಷ್ಟಿ

