ವಾಷಿಂಗ್ಟನ್: ನಿಮ್ಮಲ್ಲಿ ಜಿಮೇಲ್ (Gmail) ಖಾತೆ ಇದ್ದರೂ ಕೂಡಾ ಅದನ್ನು 2 ವರ್ಷಗಳಿಂದ ಬಳಸಿಯೇ ಇಲ್ಲ ಎಂದಾದರೆ ನಿಮ್ಮ ಖಾತೆಗೆ ಇದೀಗ ಕುತ್ತು ಬರುವ ಸಾಧ್ಯತೆಯಿದೆ.
ಗೂಗಲ್ (Google) ತನ್ನ ಬಳಕೆದಾರರ ನಿಷ್ಕ್ರಿಯ ಖಾತೆಗಳ ನೀತಿಯಲ್ಲಿ ಹೊಸ ಬದಲಾವಣೆ ತಂದಿದೆ. ಬಳಕೆದಾರರು ತನ್ನ ಹಳೆಯ ಗೂಗಲ್ ಖಾತೆಗಳನ್ನು (Google Account) ಲಾಗ್‌ಇನ್ ಮಾಡಲು ಹಾಗೂ ಪರಿಶೀಲಿಸಲು ಹೇಳಿದೆ. ಈ ಹಿಂದೆ 2 ವರ್ಷಗಳಿಂದ ಕಾರ್ಯನಿರ್ವಹಿಸದ ಖಾತೆಗಳಲ್ಲಿ ಸಂಗ್ರಹವಾಗಿರುವ ಡೇಟಾಗಳನ್ನು ಅಳಿಸಿ ಹಾಕುವುದಾಗಿ ಗೂಗಲ್ ಹೇಳಿತ್ತು. ಆದರೀಗ ಇಡೀ ಖಾತೆಯನ್ನೇ ಅಳಿಸಿ ಹಾಕುವುದಾಗಿ ಗೂಗಲ್ ಎಚ್ಚರಿಸಿದೆ.
Advertisement
Advertisement
ಈ ವರ್ಷದ ನಂತರ ಗೂಗಲ್ ಖಾತೆಯನ್ನು ಕನಿಷ್ಠ 2 ವರ್ಷಗಳವರೆಗೆ ಬಳಸದಿದ್ದರೆ ಅಥವಾ ಸೈನ್ ಇನ್ ಮಾಡದಿದ್ದರೆ ನಾವು ಖಾತೆಯನ್ನು ಹಾಗೂ ಅದರಲ್ಲಿರುವ ಡೇಟಾಗಳನ್ನು ಅಳಿಸಬಹುದು. ಅವುಗಳಲ್ಲಿ ಗೂಗಲ್ ವರ್ಕ್‌ಸ್ಪೇಸ್ (ಜಿಮೇಲ್, ಡಾಕ್ಸ್, ಡ್ರೈವ್, ಕ್ಯಾಲೆಂಡರ್), ಯೂಟ್ಯೂಬ್, ಹಾಗೂ ಗೂಗಲ್ ಫೋಟೋಸ್ ಸೇರಿರುತ್ತವೆ ಎಂದು ಗೂಗಲ್ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: Layoff: 11 ಸಾವಿರ ಜಾಬ್ ಕಟ್‌ಗೆ ವೊಡಾಫೋನ್ ಪ್ಲ್ಯಾನ್
Advertisement
ಈ ಹೊಸ ನೀತಿಯ ಬಗ್ಗೆ ಬಳಕೆದಾರರು ಈ ವರ್ಷದ ಡಿಸೆಂಬರ್ ವರೆಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಜಿಮೇಲ್‌ನಲ್ಲಿ ಸಕ್ರಿಯವಾಗಿಲ್ಲದ ಬಳಕೆದಾರರು ತಮ್ಮ ಹಳೆಯ ಖಾತೆಯನ್ನು ಹಿಂಪಡೆಯಲು ಇನ್ನೂ ಸಮಯವಿದೆ. ಆದರೆ ಒಂದು ಬಾರಿ ಡಿಲೀಟ್ ಆದ ಖಾತೆಯನ್ನು ಮರುಬಳಕೆ ಮಾಡಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.
Advertisement
ಬಳಕೆದಾರರು ಈ ನೀತಿಯ ಬದಲಾವಣೆ ಬಗ್ಗೆ ತಿಳಿದುಕೊಂಡಿರುವುದು ಹಾಗೂ ತಮ್ಮ ನಿಷ್ಕ್ರಿಯ ಗೂಗಲ್ ಖಾತೆಗಳನ್ನು ಅಳಿಸದಂತೆ ತಡೆಯಲು ಕ್ರಮ ಕೈಗೊಳ್ಳುವುದು ಅತ್ಯಗತ್ಯ. ಇದಕ್ಕಾಗಿ ಬಳಕೆದಾರರು ತಮ್ಮ ಹಳೆಯ ಖಾತೆಗಳನ್ನು ಪರಿಶೀಲಿಸುವುದು ಹಾಗೂ ವಿವಿಧ ಚಟುವಟಿಕೆಯನ್ನು ನಿರ್ವಹಿಸುವುದರಿಂದ ಖಾತೆಗಳನ್ನು ಅಳಿಸದಂತೆ ತಪ್ಪಿಸಬಹುದು. ಇದನ್ನೂ ಓದಿ: ಮೊಬೈಲ್ ಫೋನ್ ಕಳೆದು ಹೋದ್ರೆ ಇನ್ನು ಚಿಂತಿಸಬೇಕಿಲ್ಲ – ಶೀಘ್ರವೇ ಕೇಂದ್ರ ತರಲಿದೆ ಟ್ರ್ಯಾಕಿಂಗ್ ಸಿಸ್ಟಮ್