ಬೆಳಗಾವಿ: ಕರ್ನಾಟಕದ ಬಸ್ ಚಾಲಕರು, ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದರು. ಈ ಹಿನ್ನೆಲೆ ಇಂದು ಬೆಳಗಾವಿಗೆ ಭೇಟಿ ನೀಡಿದ್ದ ಸಚಿವರು ಹಲ್ಲೆಗೊಳಗಾದ ಕಂಡೆಕ್ಟರ್ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ರಾಮನಗರ | ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ದರ್ಶನ್ ತಾಯಿ ಭೇಟಿ
Advertisement
Advertisement
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಂಡಕ್ಟರ್ ಆರೋಗ್ಯ ಸ್ಥಿರವಾಗಿದೆ. ಎರಡು ದಿನಗಳಲ್ಲಿ ಮನೆಗೆ ಕಳುಹಿಸುತ್ತಾರೆ. ನಮ್ಮ ಎಂಡಿ ಅವರು ಪ್ರತಿದಿನ ಬಂದು ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಗಲಾಟೆಯಾದ ಬಳಿಕ ಕೇಸ್ ಕೊಟ್ಟಿದ್ದಕ್ಕೆ ಗಾಬರಿಯಾಗಿದ್ದಾರೆ. ಏನೇ ಕೇಸ್ ಮಾಡಲಿ ತನಿಖೆ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಹಾವೇರಿ | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
Advertisement
ಆ ಬಸ್‌ನಲ್ಲಿ ಅಂದು 90 ಜನ ಇದ್ದರು. ಕರ್ನಾಟಕದಲ್ಲಿ 1,72,000 ಟ್ರಿಪ್ ಇರುತ್ತದೆ. ಈ ರೀತಿ ದೂರು 65 ವರ್ಷದಲ್ಲಿ ಕೇಸ್ ದಾಖಲಾಗಿಲ್ಲ. ಉದ್ದೇಶಪೂರ್ವಕವಾಗಿ ಕೇಸ್ ಕೊಟ್ಟಿದ್ದಾರೆ. ನಾನು ಗೃಹಮಂತ್ರಿಗಳ ಜೊತೆಗೆ ಮಾತನಾಡುತ್ತೇನೆ. ಮಹದೇವಪ್ಪ ಪರವಾಗಿ ನಮ್ಮ ಇಲಾಖೆ ಇದೆ. ಸಾರ್ವಜನಿಕರೂ ಸಹ ಇದ್ದಾರೆ ಎಂದು ನುಡಿದರು. ಇದನ್ನೂ ಓದಿ: 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ – ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
Advertisement
ಚಿತ್ರದುರ್ಗದಲ್ಲಿ ನಮ್ಮವರು ಮಸಿ ಬಳಿದರು, ಅದರ ಮಾರನೇ ದಿನ ಮಹಾರಾಷ್ಟ್ರದವರು ಮಸಿ ಬಳಿದರು ಎರಡೂ ರಾಜ್ಯಕ್ಕೆ ಇದರಿಂದ ನಷ್ಟ ಆಗುತ್ತದೆ. ಸಾರ್ವಜನಿಕರಿಗೂ ತೊಂದರೆ ಹಾಗೂ ಇಲಾಖೆಗೂ ನಷ್ಟ ಆಗುತ್ತದೆ. ಶಿವಸೇನೆಯಂತಹ ಪಕ್ಷ ಇಂತಹ ಕೆಲಸಗಳಿಗೆ ಬೆಂಬಲ ನೀಡಬಾರದು. ಇದೊಂದು ಸಣ್ಣ ಕಾರಣಕ್ಕೆ ಆಗಿದೆ. ಶಿವಸೇನೆಯವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು. ಅಂತವರ ಮೇಲೆ ಕ್ರಮ ಕೈಗೊಳ್ಳಬೇಕು. ಬೆಳಗಾವಿಯಲ್ಲಿ ಎಂಇಎಸ್‌ನವರು ಗೂಂಡಾಗಿರಿ ಮಾಡವವರಿಗೆ ಬೆಂಬಲ ಕೊಟ್ಟರೆ ನಾವು ಕೇಸ್ ಹಾಕುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ನಾನು, ಟ್ರಂಪ್, ಮೋದಿ ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ?: ಮೆಲೋನಿ ಪ್ರಶ್ನೆ