ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಮತ್ತು ಮಹಾತ್ಮ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಬೇಕೆಂಬ ವಿರೋಧ ಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ವಿರೋಧ ಪಕ್ಷದ ಅಭ್ಯರ್ಥಿಯು ರಾಷ್ಟ್ರೀಯ ಒಮ್ಮತದಿಂದ ಆಯ್ಕೆ ಮಾಡಿದ್ದರು, ದೇಶದ ಅತ್ಯುನ್ನತ ಹುದ್ದೆಯ ಅಭ್ಯರ್ಥಿ ಹೆಸರಿಗೆ ನನ್ನನ್ನು ಹೆಸರಿಸಿದ್ದಕ್ಕಾಗಿ ಕೃತಜ್ಞನಾಗಿದ್ದೇನೆ ಆದರೆ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಈಗಾಗಲೇ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‍ಸಿ) ನಾಯಕ ಫಾರೂಕ್ ಅಬ್ದುಲ್ಲಾ ಅವರ ಹೆಸರು ಕೇಳಿಬಂದಿತ್ತು. ಆದರೆ ಈ ಇಬ್ಬರೂ ನಾಯಕರು ಸ್ಪರ್ಧಿಸಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದಿದ್ದು ಬೆಂಕಿ ಹಚ್ಚಲು: ಸೊರಕೆ
Advertisement
ರಾಷ್ಟ್ರಪತಿ ಭವನಕ್ಕೆ ಪೈಪೋಟಿ ಸಮೀಪಿಸುತ್ತಿದ್ದಂತೆ ವಿರೋಧ ಪಕ್ಷಗಳು ಮಂಗಳವಾರ ಸಭೆ ಸೇರಿ ಒಮ್ಮತದ ಅಭ್ಯರ್ಥಿಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ