InternationalLatestMain Post

ಲಂಕಾ ಅಧ್ಯಕ್ಷ ರಾಜಪಕ್ಸೆ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ

ಸಿಂಗಾಪುರ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಇದೀಗ ಸೌದಿ ಏರ್‌ಲೈನ್ಸ್ ಮೂಲಕ ಸಿಂಗಾಪುರಕ್ಕೆ ತೆರಳಿದ್ದಾರೆ.

ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಶನಿವಾರ ಅವರ ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿ, ಅಲ್ಲೇ ಠಿಕಾಣಿ ಹೂಡಿದ್ದರು.

ಲಂಕಾ ಅಧ್ಯಕ್ಷ ರಾಜಪಕ್ಸೆ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ

ಈ ಹಿನ್ನೆಲೆಯಲ್ಲಿ ಅಲ್ಲಿಂದ ತಪ್ಪಿಸಿಕೊಂಡು ಬಂದ ರಾಜಪಕ್ಸೆ ಬುಧವಾರ ಬೆಳಗ್ಗೆ ಶ್ರೀಲಂಕಾದಿಂದ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್‌ಗೆ ತೆರಳಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ಪೀಕರ್ ಮೊಹಮ್ಮದ್ ನಶೀದ್ ಸ್ವಾಗತಿಸಿದರು. ರಾಜಪಕ್ಸೆ ತಮ್ಮ ರಾಜೀನಾಮೆಯನ್ನು ಹಸ್ತಾಂತರಿಸಬೇಕಿದ್ದ ದಿನವೇ ದೇಶದಿಂದ ಪಲಾಯನ ಮಾಡಿದ್ದರು.

ಬುಧವಾರ ರಾತ್ರಿಯೇ ಸಿಂಗಾಪುರಕ್ಕೆ ತೆರಳಬೇಕಿತ್ತು. ಆದರೆ ಭದ್ರತೆಯ ಕಾರಣದಿಂದಾಗಿ ಅವರು ಪಲಾಯನ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಸಿಂಗಾಪುರಕ್ಕೆ ತರಳಿರುವ ಅವರು ಸದ್ಯಕ್ಕೆ ಇಲ್ಲೇ ವಾಸಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

ಲಂಕಾ ಅಧ್ಯಕ್ಷ ರಾಜಪಕ್ಸೆ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ

ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ. ಹಂಗಾಮಿ ಅಧ್ಯಕ್ಷರಾಗಿ ರನೀಲ್ ವಿಕ್ರಮಸಿಂಘೆ ನೇಮಕಗೊಂಡ ಬೆನ್ನಲ್ಲೇ ಅಲ್ಲಿನ ಜನ ಮತ್ತೆ ಸಿಡಿದೆದ್ದಿದ್ದಾರೆ. ವಿಕ್ರಮಸಿಂಘೆ ಕಚೇರಿಗೆ ನುಗ್ಗಿ ಜನ ದಾಂಧಲೆ ನಡೆಸಿದ್ದಾರೆ. ಸೇನಾ ಪಡೆಗಳ ಅಶ್ರುವಾಯು ಸೇರಿ ಹಲವು ರೀತಿಯ ಬಲ ಪ್ರಯೋಗಕ್ಕೂ ಬೆದರದೇ ಅಧ್ಯಕ್ಷರ ಭವನದ ಬಳಿಕ ಪ್ರಧಾನಿ ಕಚೇರಿಯನ್ನೂ ಆಕ್ರಮಿಸಿ ಗಲಾಟೆ ಮಾಡಿದ್ದಾರೆ. ಘರ್ಷಣೆಯಲ್ಲಿ ಓರ್ವ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕ್ಷಣ ಕ್ಷಣಕ್ಕೂ ಬೀದಿಗಳಲ್ಲಿ ಪ್ರತಿಭಟನೆ ಹೆಚ್ಚುತ್ತಿದೆ. ರಾಜಪಕ್ಸೆ ಪಲಾಯನ – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Live Tv

Leave a Reply

Your email address will not be published. Required fields are marked *

Back to top button