ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಗೊಟಬಯ ರಾಜಪಕ್ಸೆ ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಗುರುವಾರ ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ – ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

ಈ ಹಿನ್ನೆಲೆ ಅಲ್ಲಿಂದ ತಪ್ಪಿಸಿಕೊಂಡು ಬಂದ ರಾಜಪಕ್ಸೆ ಬುಧವಾರ ಬೆಳಗ್ಗೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್‌ಗೆ ತೆರಳಿದ್ದರು. ಬಳಿಕ ಸಿಂಗಾಪುರಕ್ಕೆ ತೆರಳಿರುವ ರಾಜಪಕ್ಸೆ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ.


