ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನರೇ ಎಚ್ಚರವಾಗಿರಿ. ಮುಂದಿನ ದಿನಗಳಲ್ಲಿ ಕುಡಿಯೋ ಹನಿ ನೀರಿಗೂ ಸಂಕಷ್ಟ ಎದುರಾಗಲಿದೆ.
ಹೌದು. ನಗರದಲ್ಲಿ ಇನ್ನು ಮುಂದೆ ಕುಡಿಯುವ ನೀರಿಗೆ `ಪಡಿತರ ಮಾದರಿ ವ್ಯವಸ್ಥೆ’ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಗುರುವಾರ ನಡೆಯುವ ಜಲಸಂಪನ್ಮೂಲ, ನಗರಾಭಿವೃದ್ಧಿ ಇಲಾಖೆ, ಕಾವೇರಿ ನೀರಾವರಿ ನಿಗಮ, ಬೆಂಗಳೂರು ಜಲಮಂಡಳಿ ಮುಖ್ಯಸ್ಥರ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ.
Advertisement
Advertisement
ತೀವ್ರ ಬರದ ಹಿನ್ನೆಲೆಯಲ್ಲಿ ಜಲಾಶಯಗಳು ಬರಿದಾಗಿರುವ ಕಾರಣ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಪಡಿತರ ಮಾದರಿ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಚಿಂತಿಸಿದೆ.
Advertisement
ಪಡಿತರ ವ್ಯವಸ್ಥೆ:
Advertisement
ಸದ್ಯ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ದಿನ ಬಿಟ್ಟು ದಿನ ಕಾವೇರಿ ನೀರು ಪೂರೈಸಲಾಗುತ್ತಿದೆ. ಕೆಲವು ಕಡೆಗಳಲ್ಲಿ ವಾರಕ್ಕೆ ಎರಡು ದಿನ ಮಾತ್ರ ನೀರಿನ ಸರಬರಾಜು ಇದೆ. ಪಡಿತರ ವ್ಯವಸ್ಥೆ ಜಾರಿಯಾದರೆ ಎಲ್ಲ ಪ್ರದೇಶಗಳಲ್ಲಿ ವಾರಕ್ಕೆ ಎರಡು ದಿನ ಮಾತ್ರ ನೀರು ಪೂರೈಕೆಯಾಗಲಿದೆ.