ಚಿಕ್ಕಬಳ್ಳಾಪುರ: ಭಾರೀ ಮಳೆಗೆ ನಂದಿಬೆಟ್ಟದ ಬಳಿಯ ಬ್ರಹ್ಮಗಿರಿ ಬೆಟ್ಟದಿಂದ ಭೂಕುಸಿತ ಉಂಟಾಗಿ ರಸ್ತೆ ಕೊಚ್ಚಿ ಹೋಗಿತ್ತು. ರಸ್ತೆ ಮರುನಿರ್ಮಾಣ ಕಾಮಗಾರಿಗೆ ಸರ್ಕಾರ ಇದೀಗ 80 ಲಕ್ಷ ಹಣ ಮಂಜೂರು ಮಾಡಿದೆ.
Advertisement
ಆಗಸ್ಟ್ 24ರಂದು ಭಾರೀ ಮಳೆಯಾಗಿ ಬ್ರಹ್ಮಗಿರಿ ಬೆಟ್ಟದ ಮೇಲಿಂದ ಬೃಹತ್ ಗಾತ್ರದ ಬಂಡೆಗಳು ಉರುಳಿಬಂದು ರಸ್ತೆ ಸಂಪೂರ್ಣ ಹಾಳಾಗಿತ್ತು. ಅಲ್ಲದೆ ರಸ್ತೆಗಳು ಭೂಕುಸಿತದಿಂದಾಗಿ ಸಂಪೂರ್ಣ ಕೊಚ್ಚಿ ಹೋಗಿ ಈ ಮಾರ್ಗವಾಗಿ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಈಗಲೂ ಸಹ ನಂದಿಗಿರಿಧಾಮಕ್ಕೆ ವಾಹನಗಳ ಸಂಚಾರ ಸಂಪೂರ್ಣ ಬಂದ್ ಮಾಡಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಪ್ರವಾಸಿ ವಾಹನ ಪಲ್ಟಿ – ಪ್ರವಾಸಿಗರು ಪ್ರಾಣಾಪಾಯದಿಂದ ಪಾರು
Advertisement
Advertisement
ಸೋಮವಾರದಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಪ್ರಗತಿ ಕಾಮಗಾರಿ ಆರಂಭವಾಗಲಿದೆ. ಸರಿ ಸುಮಾರು 45 ದಿನಗಳ ಒಳಗಾಗಿ ಕಾಮಗಾರಿ ಮುಗಿಯುವ ವಿಶ್ವಾಸವನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ನಂದಿಬೆಟ್ಟದ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಸಹ ತುದಿಗಾಲಲ್ಲಿ ನಿಂತಿದ್ದು, ಆದಷ್ಟು ಬೇಗ ರಸ್ತೆ ಕಾಮಗಾರಿ ಮುಗಿಯಲಿ ಎಂದು ಕಾಯುತ್ತಿದ್ದಾರೆ. ಇದನ್ನೂ ಓದಿ: ರೋಡ್ ರೋಮಿಯೋಗೆ ಕರಾಟೆ ಪಂಚ್ ಕೊಟ್ಟ ಮಹಿಳಾ ಪತ್ರಕರ್ತೆ
Advertisement