ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಬೆನ್ನೆಲ್ಲೆ, ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆ ಕೂಡ ನಡೆಸಬೇಕೆಂದು ಮತ್ತು ಚುನಾವಣೆ ನಡೆಯುವವರಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕೆಂದು ನಿರ್ಮಾಪಕ ಕೃಷ್ಣೇಗೌಡ ಸಹಕಾರ ಸಂಘಗಳ ಉಪ ನಿಬಂಧಕರಿಗೆ ದೂರು ನೀಡಿದ್ದರು. ಅದರ ಅನ್ವಯ, ಇದೀಗ ಆರು ತಿಂಗಳ ಅವಧಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಈಗಿರುವ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಅಧಿಕಾರ ಅವಧಿ ಸೆಪ್ಟೆಂಬರ್ 2021ಕ್ಕೆ ಮುಕ್ತಾಯವಾಗಿತ್ತು. ಆನಂತರ ಚುನಾವಣೆ ನಡೆಸದೇ ಅಧಿಕಾರಿ ಮುಂದುವರೆಸಲಾಗಿತ್ತು. ಹಾಗಾಗಿ ನಿರ್ಮಾಪಕ ಕೃಷ್ಣೇಗೌಡ ಅವರು ಸಹಕಾರ ಇಲಾಖೆಗೆ ಪತ್ರ ಬರೆದು, ‘ಸೆಪ್ಟೆಂಬರ್ 2021ರಲ್ಲೇ ಸಂಘದ ಪದಾವಧಿಯು ಮುಕ್ತಾಗೊಂಡಿರುವುದು ಕಂಡು ಬಂದಿದ್ದು, ಅವಧಿ ಮುಗಿದಿರುವ ಆಡಳಿತ ಮಂಡಳಿಯು ಅನಧಿಕೃತವಾಗಿ ಮುಂದುವರೆದಿರುತ್ತದೆ. ಸಂಘದ ಆಡಳಿತ ಮಂಡಳಿ ಚುನಾವಣೆಯನ್ನು ನಿಗದಿತ ಅವಧಿಯಲ್ಲಿ ನಡೆಸಲು ವಿಫಲವಾಗಿರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ ಎಂದು’ ಆದೇಶದ ಹೊರಡಿಸಲಾಗಿದೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್
ಸರಕಾರವು ಆಡಳಿತಾಧಿಕಾರಿಯನ್ನು ನೇಮಿಸಿರುವ ಕಾರಣದಿಂದಾಗಿ ಅಧ್ಯಕ್ಷರಾಗಿದ್ದ ಡಿ.ಕೆ.ರಾಮಕೃಷ್ಣ ಅವರು ರಾಜೀನಾಮೆ ಕೊಡುವಂತಾಗಿದೆ. ಅಲ್ಲದೇ, ಆಡಳಿತಾಧಿಕಾರಿಯು ಕೂಡಲೇ ಸಂಘದ ಪ್ರಭಾರ ವಹಿಸಿಕೊಂಡು, ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸಿ, ಚುನಾಯಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿ, ಸರಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ. ಈ ಆದೇಶ ಪ್ರತಿಯನ್ನು ನಿರ್ಮಾಪಕ ಕುಮಾರ್ ಶ್ರೀನಿವಾಸ್ ಮೂರ್ತಿ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡು ಶೀಘ್ರದಲ್ಲೇ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.