ನವದೆಹಲಿ: ಬೆಳಗಾವಿ–ಹುನಗುಂದ–ರಾಯಚೂರು ರಾಷ್ಟ್ರೀಯ ಹೆದ್ದಾರಿ(Belagavi Hungund Raichuru National Highway) ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಮಾಹಿತಿ ಹಂಚಿಕೊಂಡಿದ್ದಾರೆ.
ಇಂದು ದೆಹಲಿಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಅವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರೊಂದಿಗೆ ಭೇಟಿ ಮಾಡಿ, ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣದ ಕುರಿತು ಜೋಶಿ ಚರ್ಚೆ ನಡೆಸಿದರು. ಇದನ್ನೂ ಓದಿ: ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ – ಬಿ.ಸಿ ನಾಗೇಶ್
Advertisement
Advertisement
320 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದೀಗ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈ ಭಾಗದ ಜನರ ಬಹುಕಾಲದ ಬೇಡಿಕೆಯೊಂದು ಶೀಘ್ರವೇ ಈಡೇರಿದೆ ಎಂದು ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
Advertisement
Advertisement
ಮೂಲಸೌಕರ್ಯ ಅಭಿವೃದ್ಧಿ ಮತ್ತು ಜನರ ಅನುಕೂಲಕ್ಕೆ ಅನುಗುಣವಾಗಿ ಕಾಮಗಾರಿಗೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಾಗೂ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು ಎಂದು ಜೋಶಿ, ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ರಸ್ತೆ ಅಗಲೀಕರಣದ ಟೆಂಡರ್ ಗೆ ಈಗಾಗಲೇ ಅನುಮೋದನೆ ದೊರಕಿದ್ದು, ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸುವಂತೆ ಸಚಿವರು ನಿರ್ದೇಶನ ಕೂಡ ನೀಡಿದ್ದಾರೆ. ಈ ರಸ್ತೆ ಅಭಿವೃದ್ಧಿ ಕಾರ್ಯಗಳು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಿವೆ.
— Pralhad Joshi (@JoshiPralhad) November 30, 2022
ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸುತ್ತಮುತ್ತಲಿನ ಹೆದ್ದಾರಿಗಳ ಅಭಿವೃದ್ಧಿ, ಚತುಷ್ಪಥ ಮತ್ತು ಷಟ್ಪಥ ರಸ್ತೆ ಹಾಗೂ ಅಂಡರ್ ಪಾಸ್ ಗಳ ಅಭಿವೃದ್ಧಿಯ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭರವಸೆ ನೀಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ಜೋಶಿ ತಿಳಿಸಿದ್ದಾರೆ.