ನವದೆಹಲಿ: ವಾಹನಗಳ ದಾಖಲೆಗಳನ್ನು ಸವಾರರು ತಮ್ಮ ಡಿಜಿ ಲಾಕರ್ ಆ್ಯಪ್ ಮೂಲಕವೇ ಪೊಲೀಸರಿಗೆ ತೋರಿಸಬಹುದೆಂದು ಕೇಂದ್ರ ಸರ್ಕಾರ ಡಿಜಿ ಲಾಕರ್ ಸೇವೆಗೆ ಅಧಿಕೃತ ಆದೇಶ ನೀಡಿದೆ.
ಕೇಂದ್ರ ಸಾರಿಗೆ ಇಲಾಖೆಯು ದಾಖಲೆಗಳನ್ನು ಡಿಜಿ ಲಾಕರ್ ನಲ್ಲಿಯೇ ಪರಿಶೀಲಿಸಬಹುದೆಂದು ಮಾನ್ಯತೆ ನೀಡಿ, ಮಹತ್ವದ ಆದೇಶವನ್ನು ಹೊರಡಿಸಿದೆ. ಇದರಿಂದಾಗಿ ವಾಹನಸವಾರರು ಇನ್ನು ಮುಂದೆ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ವಾಹನಗಳನ್ನು ಅಡ್ಡಹಾಕಿ ದಾಖಲೆ ಕೇಳಿದರೆ, ಸವಾರರು ತಮ್ಮ ಮೊಬೈಲ್ ನಲ್ಲಿರುವ ದಾಖಲೆ ತೋರಿಸಿ ದಂಡ ಹಾಗೂ ಕಾನೂನಿನ ಕ್ರಮದಿಂದ ಪಾರಾಗಬಹುದಾಗಿದೆ.
Advertisement
Advertisement
ಈ ಸಂಬಂಧ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಸ್ಮಾರ್ಟ್ಕಾರ್ಡ್ ಅಥವಾ ಕಾಗದ ರೂಪದ ದಾಖಲೆಗಳಿಗೆ ಡಿಜಿಟಲ್ ದಾಖಲೆಗಳನ್ನು ಸಲ್ಲಿಸಬಹುದೆಂದು ಉಲ್ಲೇಖಿಸಲಾಗಿದೆ. ಸದ್ಯ ಇಲಾಖೆ ಡಿಜಿಲಾಕರ್ ಆ್ಯಪ್ನಲ್ಲಿ ಚಾಲನಾ ಪರವಾನಗಿ, ನೋಂದಣಿ ಪತ್ರ ಮತ್ತು ವಾಯುಮಾಲಿನ್ಯ ಪ್ರಮಾಣಪತ್ರದ ಡಿಜಿಟಲ್ ಪ್ರತಿಗಳನ್ನು ಸಂಗ್ರಹಿಸಬಹುದಾಗಿದೆ.
Advertisement
ಇದಲ್ಲದೇ ಕುಡಿದು, ಅಜಾಗರೂಕ ಚಾಲನೆ ಹಾಗೂ ಇನ್ನು ಮುಂತಾದ ಸಂದರ್ಭಗಳಲ್ಲಿ ಸಂಚಾರಿ ಪೊಲೀಸರು ಸವಾರರ ಮೂಲ ಚಾಲನಾ ಪತ್ರವನ್ನು ಮುಟ್ಟುಗೊಳ್ಳುವ ಅಧಿಕಾರವನ್ನು ಹೊಂದಿರುತ್ತಾರೆ. ಅಧಿಕಾರಿಗಳು ಕಾನೂನು ರೀತಿ ಡಿಎಲ್ ಮತ್ತು ಆರ್ ಸಿ ಜಪ್ತಿಮಾಡಬೇಕಾದ ಪ್ರಕರಣಗಳಲ್ಲಿ ದಾಖಲೆಯ ಮೂಲ ಪ್ರತಿ ಅಗತ್ಯವಾಗಿರಲಿದೆ.
Advertisement
ಏನಿದು ಡಿಜಿ ಲಾಕರ್?
ಕೇಂದ್ರ ಸರ್ಕಾರವು ಆನ್‍ಲೈನ್‍ಗಳಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಶೇಖರಣಾ ಮಾಡಿ ನಮಗೆ ಯಾವಾಗ ಬೇಕಾದರೂ ಪಡೆಯಬಹುದಾದ ನೂತನ ಡಿಜಿ ಲಾಕರ್ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ಈ ಡಿಜಿ ಲಾಕರ್ ವೆಬ್‍ಸೈಟ್‍ನಲ್ಲಿ ಒಟ್ಟು 1 ಜಿಬಿವರೆಗಿನ ದಾಖಲೆಗಳನ್ನು ಶೇಖರಿಸಿಡಬಹುದಾಗಿದೆ. ಅಲ್ಲದೇ ಯಾವುದೇ ದಾಖಲೆಗಳ ಪರಿಶೀಲನೆಗೆ ಈ ಡಿಜಿ ಲಾಕರ್ ವ್ಯವಸ್ಥೆ ಬಲು ಸುಲಭವಾಗಿದೆ. ಇದರಲ್ಲಿ ಶೈಕ್ಷಣಿಕ ಪ್ರಮಾಣ ಪತ್ರ, ಅಂಕಪಟ್ಟಿ, ಗುರುತಿನ ಚೀಟಿ, ವಾಹನ ಚಾಲನಾ ಪರವಾನಿಗೆ, ವಿಮೆ ಹಾಗೂ ಮೊದಲಾದ ದಾಖಲೆಗಳನ್ನು ಇಮೇಜ್ ರೂಪದಲ್ಲಿ ಸಂಗ್ರಹಿಸಿಡಬಹುದಾಗಿದೆ.
ಡಿಜಿ ಲಾಕರ್ ಪಡೆಯುವುದು ಹೇಗೆ?
ಸಾರ್ವಜನಿಕರು ತಮ್ಮ ಸ್ಮಾರ್ಟ್ ಫೋನ್‍ಗಳಲ್ಲಿ ಪ್ಲೇ ಸ್ಟೋರ್ ಹಾಗೂ ಆಪಲ್ ಐಓಎಸ್ ಮುಖಾಂತರ ಡಿಜಿಲಾಕರ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿ, ಸೈನ್ ಅಪ್ ಆಯ್ಕೆ ಒತ್ತಬೇಕು, ನಂತರ ಹೊಸ ಯೂಸರ್ ನೇಮ್ ಮತ್ತು ಪಾಸ್ ವರ್ಡ್ ಹಾಕಿ, ಆಧಾರ್ ಸಂಖ್ಯೆ ನಮೂದಿಸಿ ನೋಂದಣಿ ಮಾಡಿಕೊಂಡು ಸುಲಭವಾಗಿ ಬಳಸಿಕೊಳ್ಳಬಹುದಾಗಿದೆ.
ದಿನ ನಿತ್ಯ ಜೀವನದಲ್ಲಿ ಡಿಜಿ ಲಾಕರ್ ಉಪಯೋಗವೇನು?
ಆಧಾರ್ ಮೂಲಕ ಡಿಜಿ ಲಾಕರ್ ಬಳಸುವುದು ಹೇಗೆ?
https://youtu.be/27U4XUl-nyg
ಡಿಜಿ ಲಾಕರ್ ನಲ್ಲಿ ದಾಖಲೆಗಳನ್ನು ಸಂಗ್ರಹಿಸುವುದು ಹೇಗೆ?
https://youtu.be/7P17ZJdKmts
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews