ಬೆಂಗಳೂರು: ಖ್ಯಾತ ಸಾಹಿತಿಗಳಾದ ಪು.ತಿ.ನರಸಿಂಹಚಾರ್ (P T Narasimhachar) ಹಾಗೂ ಕೆ.ಎಸ್.ನರಸಿಂಹಸ್ವಾಮಿರವರ ( K S Narasimhaswami) ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಸರ್ಕಾರ ಎಲ್ಲಾ ರೀತಿಯ ಅಗತ್ಯ ನೆರವು ನೀಡಲಿದ್ದು, ಆದಷ್ಟು ಶೀಘ್ರ ಅನುಷ್ಠಾನಕ್ಕೆ ಬರಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvaraya Swamy) ತಿಳಿಸಿದರು.
Advertisement
ವಿಕಾಸಸೌಧದಲ್ಲಿ ಪು.ತಿ.ನ ಹಾಗೂ ಕೆ.ಎಸ್.ನ ಟ್ರಸ್ಟ್‌ನ ಅಧ್ಯಕ್ಷರು, ಸದಸ್ಯರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ಜನಿಸಿದ ಇಬ್ಬರೂ ಸಾಹಿತಿಗಳು ಇಡೀ ನಾಡಿನ ಹೆಮ್ಮೆಯಾಗಿದ್ದಾರೆ. ಅವರ ಸಾಹಿತ್ಯ ಕೃತಿಗಳು ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯವಾಗಿವೆ. ಇವರಿಬ್ಬರ ಸ್ಮರಣಾರ್ಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಾರಂಭಿಸಿರುವ ಟ್ರಸ್ಟ್‌ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಎಲ್ಲಾ ರೀತಿಯ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲ್ಯಾಕ್ ಪೇಪರ್ ಬಿಡುಗಡೆ: ಬೊಮ್ಮಾಯಿ
Advertisement
ಮೇಲುಕೋಟೆಯಲ್ಲಿರುವ ಪು.ತಿ.ನರವರ ಮನೆಯನ್ನು ಈಗಾಗಲೇ ನವೀಕರಣಗೊಳಿಸಲಾಗಿದೆ. ಸಮಾಧಿ ಸ್ಥಳ ಅಭಿವೃದ್ಧಿ ಮಾಡಲು ಬಹಳ ದಿನಗಳಿಂದ ಬೇಡಿಕೆಯಿದೆ. ಬಯಲು ರಂಗಮಂದಿರಕ್ಕೆ ಮೇಲ್ಛಾವಣಿ ಹಾಕಿಸುವ ಕಾರ್ಯ ಮತ್ತು ಅವರ ಸಾಹಿತ್ಯಗಳ ಮರುಮುದ್ರಣ ಹಾಗೂ ಜನಪ್ರಿಯಗೊಳಿಸುವ ಪ್ರಯತ್ನಗಳಿಗೆ ಅಗತ್ಯ ನೆರವನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಸಿಎಂ ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ
Advertisement
Advertisement
ಈಗಾಗಲೇ ಆರ್ಥಿಕ ವರ್ಷ ಕೊನೆಯಲ್ಲಿರುವುದರಿಂದ ಉಳಿಕೆ ಅನುದಾನ ಪಡೆದು ಒಂದು ವೇಳೆ ಸಾಧ್ಯವಾಗದಿದ್ದರೆ ಹೊಸ ಬಜೆಟ್‌ನಲ್ಲಿ ಹಣಕಾಸು ನೆರವು ಪಡೆದು ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್; ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? – ವಿಜಯೇಂದ್ರ
ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿರುವ ಕೆ.ಎಸ್.ನರಸಿಂಹಸ್ವಾಮಿರವರ ನಿವಾಸವನ್ನು ಸ್ಮಾರಕವನ್ನಾಗಿ ಪರಿವರ್ತಿಸುವುದು. ಕೆ.ಎಸ್.ನರವರಿಗೆ ಸ್ಫೂರ್ತಿ ನೀಡಿದ ಕೆರೆಯನ್ನು ಸಣ್ಣ ನೀರಾವರಿ ಮತ್ತು ಪ್ರವಾಸೋದ್ಯಮ ಇಲಾಖೆಗಳ ನೆರವಿನೊಂದಿಗೆ ವಿಹಾರ ಧಾಮವನ್ನಾಗಿ ಅಭಿವೃದ್ಧಿಪಡಿಸುವ ಕಾರ್ಯವನ್ನು ಸಹ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಶಮಿಗೆ 5 ವಿಕೆಟ್; ಬಾಂಗ್ಲಾ ಆಲೌಟ್ – ಟೀಂ ಇಂಡಿಯಾಗೆ 229 ರನ್‌ಗಳ ಗುರಿ
ಇಬ್ಬರು ಸಾಹಿತಿಗಳು ಕುವೆಂಪು, ಬೇಂದ್ರೆಯಷ್ಟೇ ಮಹೋನ್ನತರಾಗಿದ್ದು, ಮಂಡ್ಯ ಜಿಲ್ಲೆಗೆ ಅಪಾರ ಕೀರ್ತಿ ತಂದಿದ್ದಾರೆ. ಅವರ ಹಿರಿಮೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ, ಕಾಪಾಡಿಕೊಳ್ಳುವ ಜವಾಬ್ದಾರಿ ಸರ್ಕಾರ, ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ ಮೇಲಿದೆ. ಎಲ್ಲರೂ ಒಗ್ಗೂಡಿ ಕೆ.ಎಸ್.ನ ಹಾಗೂ ಪು.ತಿ.ನರವರ ಜೀವನ, ಸಾಧನೆ, ಆದರ್ಶಗಳನ್ನು ಜಗಕ್ಕೆ ಪಸರಿಸೋಣ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ಮಾತಿನ ಪಟ್ಟಿ ಮಾಡಿಕೊಳ್ತಿದ್ದೀನಿ, ಒಂದೇ ಸಲ ಉತ್ತರ ಕೊಡ್ತೀನಿ: ವಿಜಯೇಂದ್ರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ನಮ್ಮ ಮನವಿಗೆ ಸ್ಪಂದಿಸಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಎರಡೂ ಟ್ರಸ್ಟ್‌ಗಳಿಗೆ ಹೊಸ ಸ್ವರೂಪ ನೀಡಲಾಗುವುದೆಂದು ತಿಳಿಸಿದರು. ಇದನ್ನೂ ಓದಿ: ಇ.ಡಿ ವಿಚಾರಣೆಯಿಂದ ಸಿಎಂ ಪತ್ನಿಗೆ ರಿಲೀಫ್ – ಪಾರ್ವತಿ, ಸಚಿವ ಬೈರತಿಗೆ ಮಧ್ಯಂತರ ರಕ್ಷಣೆ ಮುಂದುವರಿಕೆ
ಪು.ತಿ.ನ ಟ್ರಸ್ಟ್ ಅಧ್ಯಕ್ಷ ಪ್ರೊ.ಕೃಷ್ಣೇಗೌಡ, ಕೆ.ಎಸ್.ನ ಟ್ರಸ್ಟ್ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿರವರು ಟ್ರಸ್ಟ್‌ನ ಆಶಯ ಹಾಗೂ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದರು. ಎರಡೂ ಟ್ರಸ್ಟ್‌ಗಳ ಸದಸ್ಯರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಚಿಕನ್ ಖರೀದಿಗೆ ಬಂದಿದ್ದ ದೈತ್ಯ ವಿದೇಶಿ ಪ್ರಜೆ ಕೊಲೆ – ಅನುಮಾನಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!