ಯಾದಗಿರಿ: ಸರ್ಕಾರ ರೈತರ ಹೋರಾಟಕ್ಕೆ (Farmers Protest) ಮಣಿದು ನಾರಾಯಣಪುರ ಜಲಾಶಯದ (Narayanapura Dam) ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಿದೆ.
ರಾಯಚೂರು, ಯಾದಗಿರಿ ಜಿಲ್ಲೆಯ ರೈತರು, ಹೋರಾಟಗಾರರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿರುವ ನಾರಾಯಣಪುರ ಜಲಾಶಯದ ಎಡದಂಡೆ ಕಾಲುವೆಗೆ 4 ಸಾವಿರ ಕ್ಯುಸೆಕ್ ಹಾಗೂ ಬಲದಂಡೆ ಕಾಲುವೆಗೆ 1 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಆನೆಧಾಮ ಸ್ಥಾಪನೆಯಿಂದ ಆನೆ ಸಮಸ್ಯೆಗೆ ಪರಿಹಾರ: ಈಶ್ವರ್ ಖಂಡ್ರೆ
ನ.30ರವರೆಗೆ ನೀರು ಹರಿಸುವಂತೆ ಆಗ್ರಹಿಸಿ ರೈತರು ಹೋರಾಟ ನಡೆಸಿದ್ದರು. ಆದರೆ ನವೆಂಬರ್ 24ರಿಂದ 26ರವರೆಗೆ ಮೂರು ದಿನಗಳ ಕಾಲ ನೀರು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಒಂದೂವರೆ ಟಿಎಂಸಿ ನೀರನ್ನು ಹರಿಸಲು ನೀರಾವರಿ ಸಲಹಾ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ.
ಇದೀಗ ಕೆಬಿಜೆಎನ್ಎಲ್ ಅಧಿಕಾರಿಗಳಿಂದ ನೀರು ಬಿಡುಗಡೆಯಾಗಿದ್ದು, ಮೆಣಸಿನಕಾಯಿ, ಹತ್ತಿ ಬೆಳೆ ಒಣಗುವ ಆತಂಕದಲ್ಲಿದ್ದ ರೈತರಿಗೆ ಕೊಂಚ ಸಮಾಧಾನ ಸಿಕ್ಕಂತಾಗಿದೆ. ತದನಂತರ ಗೇಟ್ ಬಂದ್ ಮಾಡುವ ಸಾಧ್ಯತೆ ಇದೆ.ಇದನ್ನೂ ಓದಿ: ಶಿರೂರು | ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾವು
