ಕೊಡಗು: ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
Advertisement
ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Advertisement
Advertisement
ಇದೇ ವೇಳೆ ಕೊಡಗಿಗೆ ಸುಸಜ್ಜಿತವಾದ ಒಂದು ಆಸ್ಪತ್ರೆ ಬೇಕು ಎಂದು ಕೊಡಗಿನ ಜನತೆ ಆರಂಭಿಸಿದ ಟ್ವಿಟ್ಟರ್ ಅಭಿಯಾನದ ಬಗ್ಗೆ ಮಾತನಾಡಿ, ಅಪಘಾತ ಅಥವಾ ತುರ್ತು ಸಂದರ್ಭವಿದ್ದರೆ ರೋಗಿಗಳನ್ನು ನಾವು 100-200 ಕಿ.ಮೀ. ಕರೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಇತ್ತೀಚೆಗೆ ನನ್ನ ತಂದೆ ಕೂಡ ಅನಾರೋಗ್ಯಕ್ಕೀಡಾಗಿದ್ದರು. ಆ ಸಮಯದಲ್ಲಿ ನಮ್ಮ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲದ ಕಾರಣ ಅನಿವಾರ್ಯವಾಗಿ ನಾವು ಬೆಂಗಳೂರಿಗೆ ಕರೆದೊಯ್ಯಬೇಕಾಯಿತು. ಕೊಡಗು ಜಿಲ್ಲೆಯಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಜನತೆಗೆ ತುಂಬಾ ಅನುಕೂಲವಾಗುತ್ತದೆ ಎಂದು ಹೇಳಿದರು.
Advertisement
https://twitter.com/actressharshika/status/1139493122834964480
ಶಿವಣ್ಣ ನಂತರ ಅಭಿಯಾನ ಬೆಂಬಲಿಸಿ ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದೇನೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ ಮುಂದಿನ ದಿನದಲ್ಲಿ ನಮ್ಮ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.