ಆನೇಕಲ್: ಮಹತ್ವದ ಕಾರ್ಯಾಚರಣೆಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸರ್ಕಾರಿ ಜಾಗವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕೊಪ್ಪ ಗ್ರಾಮದ ಸರ್ವೆ ನಂಬರ್ 110 ರಲ್ಲಿ ಸುಮಾರು 10 ಎಕ್ರೆ ಗೋಮಾಳ ಜಾಗವನ್ನ ಕೆಲವು ಭೂಗಳ್ಳರು ಅಕ್ರಮವಾಗಿ ವಶಪಡಿಸಿಕೊಂಡಿದ್ದರು. ಅಲ್ಲದೇ ನಕಲಿ ದಾಖಲೆ ಸೃಷ್ಟಿ ಮಾಡಿ ಎಸಿ ಅಪೂರ್ವ ಬಿದರಿ ಅವರ ಕೈಲಿ ಪೋಡಿ ಸಹ ಮಾಡಿಸಿಕೊಂಡಿದ್ದರು.
ಈ ದಾಖಲಾತಿಗಳನ್ನ ಡಿಸಿ ನೇತೃತ್ವದ ತಂಡ ಪರಿಶೀಲನೆ ನಡೆಸಿದಾಗ ಅಕ್ರಮವಾಗಿರೋದು ಬೆಳಕಿಗೆ ಬಂದಿದೆ. ಕೂಡಲೇ ಜಿಲ್ಲಾಧಿಕಾರಿ ಜಗದೀಶ್ ಒತ್ತುವರಿ ತೆರವು ಕಾರ್ಯಾಚರಣೆಗೆ ಆದೇಶ ನೀಡಿದ್ದು, ಖುದ್ದು ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬಂದು ಪೊಲೀಸ್ ಬಿಗಿ ಭದ್ರತೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನ ನಡೆಸಿದ್ದಾರೆ.



