– ಗುಣಮಟ್ಟದ ಔಷಧಿ ಖರೀದಿಗೆ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ
ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕ, ಬೌದ್ಧಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸ ಬರಿದಾಗಿದೆ. ಗುಣಮಟ್ಟದ ಔಷಧಿ ಖರೀದಿ ಮಾಡಲೂ ದುಡ್ಡಿಲ್ಲ. ಕಳಪೆ ಔಷಧಿ ಪೂರೈಕೆ ಕಂಪನಿಗಳಿಂದ ಖರೀದಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಗಂಭೀರ ಆರೋಪ ಮಾಡಿದರು.
Advertisement
ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯೇ ಲಭ್ಯವಿಲ್ಲ. ವೈದ್ಯರು ಹೊರಗಡೆ ತರಲು ಚೀಟಿ ಬರೆದು ಕೊಡುತ್ತಿದ್ದಾರೆ. ರಾಜ್ಯವನ್ನು ಇಂಥ ಅವಸ್ಥೆಗೆ ತಂದಿಟ್ಟಿದೆ ಈ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಬಾಣಂತಿಯರು, ಮಕ್ಕಳ ಸಾವು ಪ್ರಕರಣ – ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ತನಿಖೆಗೆ ಹೆಬ್ಬಾಳ್ಕರ್ ಆದೇಶ
Advertisement
Advertisement
ಗುಣಮಟ್ಟದ ಔಷಧಿ ಖರೀದಿಸಲು ಹಣವಿಲ್ಲ:
ಗುಣಮಟ್ಟದ ಕಂಪನಿಗಳಿಂದ ಔಷಧಿ ಖರೀದಿಸಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ಸಿಕ್ಕಸಿಕ್ಕ ಕಂಪನಿಗಳಿಂದ ಔಷಧಿ ಖರೀದಿಸುತ್ತಿದ್ದಾರೆ. ಅದರ ಪರಿಣಾಮದಿಂದಲೇ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದೆ ಎಂದು ಕಿಡಿಕಾರಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕೆಟ್ಟ ಮೇಲೆ ಬುದ್ಧಿ ಬಂದಂತಿದೆ. ಈಗ ಪ್ರಕರಣದ ಗಂಭೀರತೆ, ಸೂಕ್ಷ್ಮತೆ ಅರಿತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದಿನ ರಾತ್ರಿ 2-3 ಹುಡುಗರನ್ನ ಕರೆದುಕೊಂಡು ಬರುತ್ತಿದ್ದಳು – ಅಪಾರ್ಟ್ಮೆಂಟ್ ಮಾಲೀಕ ಕೆಂಪೇಗೌಡ
Advertisement
ಆರೋಗ್ಯ ಸಚಿವರ ವೈಫಲ್ಯ:
ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಆರೋಗ್ಯ ಸಚಿವರು ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರದತ್ತ ಬೆರಳು ತೋರುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕರ್ನಾಟಕ-ಲಕ್ಷದ್ವೀಪ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಕೆಎಂಬಿ ಪೂರ್ವ ಭಾವಿಯಾಗಿ ಕೆಲಸ ಮಾಡಲಿದೆ: ಸಚಿವ ವೈದ್ಯ
ಐವಿ ದ್ರಾವಣಕ್ಕೆ ಕೇಂದ್ರ ಅನುಮತಿ ನೀಡಿದೆ ಎಂದಿದ್ದಾರೆ. ಆದರೆ, ಕೇಂದ್ರದ ಅನುಮತಿ ಪಡೆಯುವಾಗ ಗುಣಮಟ್ಟದ ಔಷಧಿ ಕಳುಹಿಸಿ ನಂತರದಲ್ಲಿ ಕಳಪೆ ಗುಣಮಟ್ಟದ್ದನ್ನು ಪೂರೈಸಿದರೆ ಯಾರು ಹೊಣೆ? ರಾಜ್ಯ ಸರ್ಕಾರ ಆಗಾಗ ತಪಾಸಣೆ ನಡೆಸಬೇಕಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬಾಲಕನ ಮೇಲೆ ಬೀದಿ ನಾಯಿ ದಾಳಿ – ಹರಿದು ಹೋಯ್ತು ತುಟಿ
ರಾಜ್ಯದಲ್ಲಿ ಐವರು ಬಾಣಂತಿಯರ ಸಾವಿಗೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಮಳೆಯಾದರೂ ಕೇಂದ್ರ, ಜನಸಂಖ್ಯೆ ಜಾಸ್ತಿ ಆದರೂ ಕೇಂದ್ರ ಕಾರಣ ಎನ್ನುವಂತಿದೆ ಇವರ ಮನಸ್ಥಿತಿ. ಇದು ಸರಿಯಲ್ಲ ಎಂದು ಖಂಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜಕೀಯ ಬಿಡುವ ಮಾತೇ ಇಲ್ಲ: ಎಸ್ಎನ್ ನಾರಾಯಣಸ್ವಾಮಿ
21ನೇ ಶತಮಾನದ ಮುಂದುವರಿದ ಮೆಡಿಕಲ್ ಸೈನ್ಸ್ ಯುಗದಲ್ಲಿ ಬಾಣಂತಿಯರ ಸಾವು ಎಂದರೆ ನಾಚಿಕೆಗೇಡಿನ ಸಂಗತಿ. ರಾಜ್ಯ ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇರುವುದಕ್ಕೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಎಸ್‌ಪಿ ಬಿಜೆಪಿಯ ಬಿ ಟೀಂ – ಆದಿತ್ಯ ಠಾಕ್ರೆ ಆಕ್ರೋಶ