ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಎಂಟಿಬಿ ನಾಗರಾಜ್‌

Advertisements

ಬೆಂಗಳೂರು: ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 5300 ಮಂದಿ ಪೌರ ಕಾರ್ಮಿಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು ಹಾಗೂ ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಮುಂದಿನ 3 ವರ್ಷಗಳಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

Advertisements

ವಿಧಾನಸೌಧದಲ್ಲಿಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವ ಎಂಟಿಬಿ ನಾಗರಾಜ್ , ಸರ್ಕಾರ ಪೌರ ಕಾರ್ಮಿಕರ ಪರ ಸಹಾನುಭೂತಿ ಹೊಂದಿದ್ದು, ಅವರ ಬೇಡಿಕೆಗಳನ್ನು ಈಡೇರಿಸಲು ಬದ್ದವಾಗಿದೆ. ಹಾಗಾಗಿ, ಪೌರಕಾರ್ಮಿಕ ಸಂಘಟನೆಗಳು ಜುಲೈ 1 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದರು.

Advertisements

 

 

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌ ರವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ನಿರ್ಣಯಿಸಿರುವಂತೆ ಪೌರಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕ ಸೇವೆಯನ್ನು ಮುಂದಿನ 3 ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆರ್ಥಿಕ ಇಲಾಖೆಯು ಈಗಾಗಲೇ 5300 ಪೌರಕಾರ್ಮಿಕರ ನೇಮಕಾತಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸಚಿವರು ಸೂಚಿಸಿದರು.
ಇದನ್ನೂ ಓದಿ: ಒಬ್ಬ ಹೇಡಿ ಮಾಡಿದ ಕೃತ್ಯಕ್ಕೆ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ: ಅಬ್ದುಲ್ ರಜಾಕ್

Advertisements

ಪೌರಕಾರ್ಮಿಕರು ಮತ್ತು ಸ್ವಚ್ಛತಾ ನೌಕರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪ್ರಸ್ತುತ ಜಾರಿಯಲ್ಲಿರುವ ಆರೋಗ್ಯ ವಿಮೆ ಸೌಲಭ್ಯವನ್ನು ಎಲ್ಲಾ ಪೌರ ಕಾರ್ಮಿಕರು ಮತ್ತು ಸ್ವಚ್ಛತಾ ನೌಕರರಿಗೂ ಅನ್ವಯವಾಗುವಂತೆ ವಿಸ್ತರಿಸುವ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಸಚಿವ ಎಂಟಿಬಿ ನಾಗರಾಜ್ ನಿರ್ದೇಶನ ನೀಡಿದರು. 2018 ರಲ್ಲಿ ರಚಿಸಲಾಗಿರುವ ಪೌರ ಕಾರ್ಮಿಕರ ನೇಮಕಾತಿ ವಿಶೇಷ ನಿಯಮಾವಳಿಗಳನ್ನು ಪುನರ್ ಪರಿಶೀಲಿಸಲು ಅನುಕೂಲವಾಗುವಂತೆ ಈಗಾಗಲೇ ಕರ್ತವ್ಯದಲ್ಲಿರುವ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರ ಸೇವಾ ವಿವರಗಳನ್ನು ಒಂದು ವಾರದ ಒಳಗಾಗಿ ಸಂಗ್ರಹಿಸಿ ಅಗತ್ಯ ಶಿಫಾರಸ್ಸುಗಳೊಂದಿಗೆ ಕಡತ ಮಂಡಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಪೌರ ಕಾರ್ಮಿಕರ ಇನ್ನುಳಿದ ಯಾವುದೇ ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಆದೇಶಿಸಿದರು. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್‌ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಅರ್ಚನಾ, ಜಂಟಿ ನಿರ್ದೇಶಕ ಶಿವಸ್ವಾಮಿ ಪಾಲ್ಗೊಂಡಿದ್ದರು.

Live Tv

Advertisements
Exit mobile version