– ಕೇಂದ್ರದಿಂದ ಅಕ್ಕಿ ಖರೀದಿಸಲು ನಿರ್ಧಾರ
ಚಿಕ್ಕಬಳ್ಳಾಪುರ: 2023ರ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ (Congress) ಘೋಷಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ (Anna Bhagya) ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಹೇಳಲಾಗುತ್ತಿದೆ.
- Advertisement -
ಹೌದು. ಅನ್ಯಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ (BPL Card) ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು. ಇದನ್ನೂ ಓದಿ: ಬ್ರಿಟಿಷರ ಮೆಂಟಾಲಿಟಿ ಸಿದ್ದರಾಮಯ್ಯನವರದ್ದು – ನೆಟ್ಟಗೆ ಆಡಳಿತ ಮಾಡಿ, ಇಲ್ಲವೇ ರಾಜೀನಾಮೆ ಕೊಡಿ: ಶೋಭಾ ಕರಂದ್ಲಾಜೆ
- Advertisement -
- Advertisement -
ಈ ತಿಂಗಳಿನಿಂದಲೇ ಅಕ್ಕಿ ವಿತರಣೆಗೆ ಸಿದ್ಧತೆ:
ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್‌ಎಸ್ (OMSS) ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದೆ.
- Advertisement -
ಈ ಸಂಬಂಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ (KH Muniyappa) ಅವರು ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: Ind vs Pak ಬ್ಲಾಕ್‌ಬಸ್ಟರ್ ಪಂದ್ಯದ VIP ಟಿಕೆಟ್ 3.50 ಕೋಟಿಗೆ ಮಾರಿಕೊಂಡ ಪಿಸಿಬಿ ಅಧ್ಯಕ್ಷ
ಅನ್ನ ಭಾಗ್ಯ ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಸರಿಯಾಗಿ ಸ್ಪಂದನೆ ಸಿಗದೇ ಇದ್ದಾಗ ರಾಜ್ಯ ಸರ್ಕಾರ ಅನ್ನಭಾಗ್ಯದ ಹಣ ನೀಡಲಾಗುವುದು ಎಂದು ತಿಳಿಸಿತ್ತು. ಅದರಂತೆ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂ. ಪಾವತಿ ಮಾಡಬೇಕಿತ್ತು. ಒಂದು ಪಡಿತರ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 20 ಕೆಜಿಗೆ ಅಕ್ಕಿಗೆ ಪ್ರತಿ ತಿಂಗಳು 850 ರೂ. ಜಮೆ ಮಾಡಬೇಕಿತ್ತು. ಆದ್ರೆ ಕಳೆದ 2 ತಿಂಗಳಿನಿಂದಲೂ ಯಾವುದೇ ಹಣ ಜಮೆಯಾದ ಹಿನ್ನೆಲೆ ಈ ಬಗ್ಗೆ ಫಲಾನುಭವಿಗಳು ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಅಲ್ಲದೇ ಸರ್ಕಾರದ ವಿರುದ್ಧ ಆಕ್ರೋಶವೂ ಹೊರಹಾಕಿದ್ದರು. ಆದರೀಗ ಹಣದ ಬದಲಿಗೆ ಅಕ್ಕಿಯನ್ನೇ ಕೊಡುವುದಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.