ಕಲಬುರಗಿ: ಸೇಡಂನಲ್ಲಿ (Sedam) ಭಾನುವಾರ ನಡೆದ ಆರ್‌ಎಸ್ಎಸ್ (RSS Route March) ಪಥಸಂಚಲನ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗಿಯಾಗಿದ್ದಾರೆ.
ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ ನಾಗರಾಜ್ ಮನ್ನೆ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಪಥಸಂಚಲನದಲ್ಲಿ ಭಾಗಿಯಾದ ವೈದ್ಯರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ: ಆರ್‌ಎಸ್‌ಎಸ್ ವಿರುದ್ಧದ ಸಂಘರ್ಷದಲ್ಲಿ ಪ್ರಿಯಾಂಕ್ ಒಂಟಿ – ಕಾಂಗ್ರೆಸ್‌ನಲ್ಲೇ ಅಪಸ್ವರ!
ಅಕ್ಟೋಬರ್12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕೆ ಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದರು. ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗಿ- ರಾಯಚೂರಿನ PDO ಅಮಾನತು


