BelgaumCrimeDistrictsKarnatakaLatestMain Post

ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ

ಬೆಳಗಾವಿ: ಸಾಕಷ್ಟು ಜನರು ಸರ್ಕಾರಿ ನೌಕರಿಗಾಗಿ ಪರದಾಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಸರ್ಕಾರಿ ನೌಕರ ತನ್ನ ಕೆಲಸಕ್ಕೆ ಮರ್ಯಾದೆ ಕೊಡದೆ ರಂಪಾಟ ಮಾಡಿದ್ದಾನೆ. ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ಅಡ್ಡಲಾಗಿ ಮಲಗಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.

ಸಂಜು ಬೆಣ್ಣಿ ಕಂಠಪೂರ್ತಿ ಕುಡಿದು ಮಲಗಿದ್ದ ಗ್ರಾಮ ಲೆಕ್ಕಾಧಿಕಾರಿ. ಈ ಮೊದಲು ಸಂಜು ಬೆಣ್ಣಿ ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಲಸಕ್ಕಿದ್ದ. ಅಲ್ಲಿಯೂ ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿಯುತ್ತಿದ್ದ ಹಿನ್ನೆಲೆ ಸವದತ್ತಿ ತಹಶೀಲ್ದಾರ್ ಕಚೇರಿ ಕರ್ತವ್ಯಕ್ಕೆ ನಿಯೋಜಿಸಿದ್ದರು. ಇದನ್ನೂ ಓದಿ: 80ಕ್ಕೂ ಹೆಚ್ಚು ಮಕ್ಕಳನ್ನ ಕಾಡುತ್ತಿದೆ ಟೊಮೆಟೊ ಜ್ವರ – ಏನಿದರ ಲಕ್ಷಣ? 

ಆದ್ರೆ, ಇಲ್ಲಿಯೂ ಸಹ ಸಂಜು ಬೆಣ್ಣಿ ತನ್ನ ಹಳೇ ಚಾಳಿ ಮುಂದುವರಿಸಿದ್ದಾನೆ. ಈತನ ರಂಪಾಟದ ಜೊತೆಗೆ ಗ್ರಾಮಸ್ಥರ ಜೊತೆ ದುರ್ವರ್ತನೆ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ. ಇದರ ಜೊತೆ ಸಂಜು ಬೆಣ್ಣಿ ವಿರುದ್ಧ ಕ್ರಮಕೈಗೊಳ್ಳದ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ವಿರುದ್ಧವೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Back to top button